Sunday, December 22, 2024

ಸಿಎಂ ವಿರುದ್ಧ ಅವಹೇಳನಕಾರಿ ಆಡಿಯೋ​ : ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಸಿಎಂ ಸಿದ್ದರಾಮಯ್ಯನ ವಿರುದ್ದ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿ ಬಿಜೆಪಿ ಕಾರ್ಯಕರ್ತನ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಕಾರು ಅಪಘಾತ: ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪಆಸ್ಪತ್ರೆಗೆ ದಾಖಲು 

ಪೊಲೀಸರು ಐಪಿಸಿ 1860 (u/s 153A,504,505(2)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು,ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿದೇವ್, ಯುವ ಇಂಟಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಗೌಡ ಸವಣಾಲು, ಸುಧೀರ್ ದೇವಾಡಿಗ, ರಬಿನ್ ಹಾಗು ಮೋಹಿತ್ ಎಂಬವರು ಪೊಲೀಸರಿಗೆ ದೂರು ನೀಡುವ ಸಂದರ್ಭದಲ್ಲಿ ಇದ್ದರು.

ಘಟನೆಯ ವಿವರ: 

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ, ವೃತ್ತಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸ ಮಾಡುವ ಕೊಕ್ಕಡದ ಬಿಜೆಪಿ ಕಾರ್ಯಕರ್ತ ರಜಿತ್ ಕೊಕ್ಕಡ ಎಂಬವರು ಆಡಿಯೋ ಹರಿಬಿಟ್ಟಿದ್ದಾರೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತ ಹಕಿಮ್ ಕೊಕ್ಕಡ ದೂರಿನಲ್ಲಿ ತಿಳಿಸಿದ್ದಾರೆ.

 

 

 

RELATED ARTICLES

Related Articles

TRENDING ARTICLES