Monday, December 23, 2024

ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ : ಸಿ.ಟಿ. ರವಿ ಮನವಿ

ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಮಾಜಿ ಸಚಿವ ಸಿ.ಟಿ. ರವಿ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಹಿಂದೂ ಎಂದು ಹೇಳಿಕೊಳ್ಳಲು ಗರ್ವ ಪಡಬೇಕು, ಸಮಾಜ ಇದನ್ನೇ ಕೇಳೋದು. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ ಎಂದು ಕುಟುಕಿದ್ದಾರೆ.

ನಾನು ಹಿಂದೂ ಅಲ್ವಾ? ನನ್ನ ಹೆಸರಲ್ಲೇ ಸಿದ್ರಾಮ ಇದ್ದಾನೆ ಎಂದಿದ್ದಾರೆ. ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ. ನೀವು ಮಾಲೆ ಹಾಕಿದೆ ಮೇಲೆ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ, ಸತ್ಯವನ್ನ ಎತ್ತಿ ಹಿಡಿದಂತಾಗುತ್ತೆ ಎಂದು ಹೇಳಿದ್ದಾರೆ.

ಜೀವನ ಪರ್ಯಂತ ಹಿಂದೂಗಳಾಬೇಕು

ನಮ್ಮ ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು? ಯಾರೂ ಚುನಾವಣೆ ಸಮಯದಲ್ಲಿ ಹಿಂದೂಗಳಾಗಬಾರದು, ಜೀವನ ಪರ್ಯಂತ ಹಿಂದೂಗಳಾಬೇಕು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು, ಮುಂದಕ್ಕೆ ನೋಡಬೇಕು. ಸಿದ್ದರಾಮಯ್ಯನವರು ಬರಲಿ ಅಂತ ಮನವಿ ಮಾಡುತ್ತೇನೆ ಎಂದು ಸಿ.ಟಿ. ರವಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES