Sunday, December 22, 2024

HDK ಬಳಿ ಇರೋದು ಪೆನ್​ ಡ್ರೈವ್​ ಅಲ್ಲ, ಪೆನ್ಸಿಲ್ ಡ್ರೈವ್, ಎಲ್ಲಾ ಅಳಿಸಿ ಹೋಗಿದೆ: ಸಚಿವ ಚೆಲುವರಾಯಸ್ವಾಮಿ!

ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್.​ ಡಿ.​ ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾರಿದರು.

ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವತ್ತು ಜನರ ಸಮಸ್ಯೆ ಬಗ್ಗೆ ಮಾತಾಡಿಲ್ಲ. ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೇ ಮಾತಾಡುತ್ತಿದ್ದಾರೆ. ಅವರ ರೀತಿ ಮಾತನಾಡುವುದು ಸರಿ ಅಂದರೇ ನಾನು ಅವರಪ್ಪನ ರೀತಿ ಮಾತಾಡುತ್ತೇನೆ. ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಅಂತ ದಾಖಲೆ ಬಿಡುಗಡೆ ಮಾಡಲಿ.

ಇದನ್ನೂ ಓದಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ!

ಅವರ ಬಳಿ ಇರುವ ಪೆನ್ ಡ್ರೈವ್ ಬಿಡುಗಡೆ ಮಾಡಲ್ಲ ಎನ್ನುತ್ತಿರುವ ಅವರು ಮಂತ್ರಿಗಳು ಕರೆ ಮಾಡಿ ಬಿಡುಗಡೆ ಮಾಡಬೇಡಿ ಅಂತಾ ಹೇಳಿದ್ದಾರೆ ಎಂದು ಹೇಳುತ್ತಾರೆ. ಅದ್ಯಾವ ಮಂತ್ರಿ ಅಂತಾ ಹೇಳಲಿ. ಅವರ ಹತ್ತಿರ ಇರುವುದು ಪೆನ್ ಡ್ರೈವ್ ಅಲ್ಲ ಪೆನ್ಸಿಲ್ ಡ್ರೈವ್, ಇರೋದು ಅಳಿಸಿ ಹೋಗಿದೆ ಎಂದು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಾಡಿದರು.

RELATED ARTICLES

Related Articles

TRENDING ARTICLES