Thursday, December 19, 2024

‘ಮರಿ ಖರ್ಗೆ’ ಮುಖ್ಯಮಂತ್ರಿ ಪಟ್ಟಕ್ಕೆ ಬೇಡಿಕೆ ಇಡುತ್ತಿದ್ದಾರೆ : ಕಟೀಲ್ ವಾಗ್ದಾಳಿ

ಮಂಗಳೂರು : ಕಾಂಗ್ರೆಸ್​ ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ ಎಂದು ಸಂಸದ ನಳಿನ್​ ಕುಮಾರ್​​​ ಕಟೀಲ್​​ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‍ ಪಕ್ಷದ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​​ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ತಂಡ ಇಬ್ಭಾಗವಾಗುತ್ತಿದೆ. ಅದರ ಮಧ್ಯೆ ಮರಿ ಖರ್ಗೆ (ಪ್ರಿಯಾಂಕ್ ಖರ್ಗೆ) ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗ್ತಿದೆ ಎಂದು ಕಟೀಲ್ ವ್ಯಂಗ್ಯವಾಡಿದ್ದಾರೆ.

RELATED ARTICLES

Related Articles

TRENDING ARTICLES