Thursday, January 23, 2025

ಭಾರತದ ಸೋಲಿಗೆ ಕೆಟ್ಟ ಶಕುನವೇ ಕಾರಣ : ಮೋದಿಯವರನ್ನು ಟೀಕಿಸಿದ ರಾಹುಲ್ ಗಾಂಧಿ

ಬೆಂಗಳೂರು : ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ರಾಜಸ್ಥಾನ ಚುನಾವಣಾ ಪ್ರಚಾರದ ವೇಳೆ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ಪನೌತಿ (ಕೆಟ್ಟ ಶಕುನ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬಂದಿತ್ತು. ಇದರಿಂದಾಗಿ ಭಾರತ ತಂಡ ಗೆಲ್ಲಬೇಕಿದ್ದ ಪಂದ್ಯವನ್ನು ಸೋತಿದೆ. ಟಿವಿಯಲ್ಲಿ ಇದನ್ನು ತೋರಿಸುವುದಿಲ್ಲ. ಆದರೆ, ಇದು ದೇಶದ ಜನತೆಗೆ ಗೊತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ವಿಶ್ವಕಪ್ ಎತ್ತಿ ಹಿಡಿಯುವಲ್ಲಿ ಎಡವಿದ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಧೈರ್ಯ ತುಂಬಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್-2023 ಫೈನಲ್‌ನಲ್ಲಿ ಗೆಲುವಿನ ಸನ್ನಿಹದಲ್ಲಿ ಎಡವಿದ ಕಾರಣ, ದೇಶವು ಇಂದು ಮತ್ತು ಯಾವಾಗಲೂ ತಂಡದೊಂದಿಗೆ ನಿಂತಿದೆ ಎಂದು ಹೇಳಿದ್ದಾರೆ.

ಪ್ರೀತಿಯ ಟೀಂ ಇಂಡಿಯಾ, ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ಸಂಕಲ್ಪ (ದೃಢನಿರ್ಧಾರ) ಗಮನ ಸೆಳೆಯಿತು. ನೀವು ಉತ್ತಮ ಉತ್ಸಾಹದಿಂದ ಆಡಿದ್ದೀರಿ ಮತ್ತು ದೇಶಕ್ಕೆ ಅಪಾರ ಹೆಮ್ಮೆ ತಂದಿದ್ದೀರಿ. ನಾವು ಇಂದು ಮತ್ತು ಯಾವಾಗಲೂ ನಿಮ್ಮೊಂದಿಗೆ ಇರುತ್ತೇವೆ ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES