Monday, December 23, 2024

ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ನೇಮಕ

ಬೆಂಗಳೂರು : ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ (ಸಿಎಸ್) ಐಎಎಸ್ ಅಧಿಕಾರಿ (ಹಿರಿಯ ಶ್ರೇಣಿ) ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಸಭೆ ನಡೆಯುತ್ತಿರುವ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕೆಲವೇ ಕ್ಷಣಗಳಲ್ಲಿ ರಜನೀಶ್ ಸಿಎಸ್ ಆಗಿ ನೇಮಕಗೊಂಡಿದ್ದಾರೆ.

ರಜನೀಶ್ ಗೋಯಲ್ ಅವರು ಪ್ರಸ್ತುತ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಿಸೆಂಬರ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಇವರು 1986ರ ಬ್ಯಾಚ್​ನ ಐಎಎಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರು ಅಧಿಕಾರಾವಧಿ ನವೆಂಬರ್ 30 ರಂದು ಕೊನೆಗೊಳ್ಳಲಿದೆ.

RELATED ARTICLES

Related Articles

TRENDING ARTICLES