ಬೆಂಗಳೂರು: ದಟ್ಟಣೆ ಅವಧಿಯಲ್ಲಿ ‘ನಮ್ಮ ಮೆಟ್ರೊ’ ರೈಲಿನಲ್ಲಿ ಪ್ರಯಾಣಿಸುವ ಯುವತಿಯರು ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಬಿಎಂಆರ್‌ಸಿಎಲ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ನಮ್ಮ ಮೆಟ್ರೋದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ BMRCL ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಡನೆಯಲ್ಲಿ ಏನಾಗಿತ್ತು?
ಯುವತಿಯೊಬ್ಬಳು ಬೆಳಗ್ಗೆ 8.30ಕ್ಕೆ ಮೆಟ್ರೋದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್ ನಿಲ್ದಾಣಕ್ಕೆ ಬಂದಿದ್ದಾಳೆ. ಮೆಟ್ರೋ ಹತ್ತುವಾಗ ದಟ್ಟಣೆಯಿತ್ತು. ಈ ವೇಳೆ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಯುವತಿಗೆ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಮುಂದಕ್ಕೆ ತೆರಳಿ ಸಹಾಯಕ್ಕೆ ಕೋರಿದ್ದರೂ ಮೆಟ್ರೊ ಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ’ ಎಂದು ಬರೆದುಕೊಂಡಿದ್ದಾರೆ.
ಇದನ್ನು ಗಮನಿಸಿದ ಹಲವರು ಮೆಟ್ರೊ ಸಂಪೂರ್ಣ ಸಿಸಿ ಟಿ.ವಿ ಕ್ಯಾಮೆರಾದ ಕಣ್ಣಾವಲಿನಲ್ಲಿದೆ. ದೂರು ಸಲ್ಲಿಸಿದರೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಸಲಹೆ ನೀಡಿದ್ದಾರೆ.