Wednesday, January 22, 2025

ಪಿಎಸ್​ಐ ಪರೀಕ್ಷೆ ಅಕ್ರಮ ಪ್ರಕರಣ: ಡಿ.23ಕ್ಕೆ ಪಿಎಸ್ಐ ಮರು‌ ಪರೀಕ್ಷೆ!

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ ‌23ರಂದು ಬೆಂಗಳೂರಿನಲ್ಲಿ ನಡೆಸಲಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ PSI ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು‌ ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ ವರದಿ ಕೊಡುವ ಮುನ್ನವೇ ವಿರೋಧಿಸುತ್ತಿದ್ದೀರಿ ಏಕೆ: ಸಿಎಂ ಸಿದ್ದರಾಮಯ್ಯ

2021ರ ಜನವರಿ 21ರಂದು ಪೊಲೀಸ್‌ ಇಲಾಖೆಯಿಂದ 545 PSI ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಟಿಸಿತ್ತು. ಅದೇ ವರ್ಷದ ಅಕ್ಟೋಬರ್‌ 3 ರಂದು ಲಿಖಿತ ಪರೀಕ್ಷೆ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

RELATED ARTICLES

Related Articles

TRENDING ARTICLES