Wednesday, January 22, 2025

ಅಂತರ್ ಜಿಲ್ಲಾ ಕಳ್ಳರನ್ನ ಬಂಧಿಸಿದ ಪೊಲೀಸರು!

ತುಮಕೂರು: ಲಕ್ಷಾಂತರ ರೂಪಾಯಿಗಳ ಮೌಲ್ಯದ ವಸ್ತು ಕಳವು ಮಾಡಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳನ್ನು ತುಮಕೂರು ಜಿಲ್ಲೆ ತುರುವೇಕೆರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ಜಿಲ್ಲೆಯ ಉದಯಗಿರಿ ತಾಲ್ಲೂಕಿನ ಸಯ್ಯದ್ ಅಜರುದ್ದಿನ್ ಮತ್ತು ಹತಾವುಲ್ಲಾ ಬಂಧಿತ ಆರೋಪಿಗಳಾಗಿದ್ದು, ಉಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆಬೀಸಿದ್ದಾರೆ. ಬಂಧಿತ ಆರೋಪಿಗಳು ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಜಾತಿಗಣತಿ ವಿಚಾರ ನಮ್ಮ ಪಕ್ಷದ ನಿಲುವಿಗೆ ನಾವು ಬದ್ದ: ಡಿಕೆಶಿ

ಹಾರ್ಡ್​​​ವೇರ್ ಅಂಗಡಿಯ ಬೀಗ ಮುರಿದ ಕಳ್ಳರು ಲಕ್ಷಾಂತರ ರೂಪಾಯಿಗಳ ಮೌಲ್ಯದ ಟಿ.ವಿ, ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಕೊಳವೆ ಬಾವಿಯ ಉಪಕರಣಗಳನ್ನು ಕಳವು ಮಾಡಿ ತಲೆಮರೆಸಿಕೊಂಡಿದ್ದರು, ಸರಣಿ ಕಳ್ಳತನದಿಂದ ಅಂಗಡಿ ಮಾಲೀಕರು ಮತ್ತು ಪಟ್ಟಣಿಗರು ಆತಂಕಕ್ಕೆ ಒಳಗಾಗಿದ್ದರು ಸದ್ಯ ಆರೋಪಿತರ ಬಂಧನದಿಂದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

RELATED ARTICLES

Related Articles

TRENDING ARTICLES