Wednesday, May 8, 2024

ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ​ಗೆ ಆಹ್ವಾನ

ಮಂಡ್ಯ : ಮಂಡ್ಯದಿಂದ ಸ್ಪರ್ಧಿಸುವಂತೆ ಜೆಡಿಎಸ್ (JDS) ಯುವಮುಖಂಡ ನಿಖಿಲ್ ಕುಮಾರಸ್ವಾಮಿಗೆ  ಆಹ್ವಾನ ಬಂದಿದೆ ಎಂದು ಜೆಡಿಎಸ್​ ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಜೆಡಿಎಸ್​ ನಾಯಕರು ಸೇರಿದಂತೆ ನಿಲ್ ಕುಮಾರಸ್ವಾಮಿಗೆ ಆಹ್ವಾನ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಮಂಡ್ಯದಲ್ಲಿ ನಿಖಿಲ್​ ಕಣಕ್ಕಿಳಿಸಲು ನಮ್ಮ ವರಿಷ್ಠರಿಗೆ ಕೇಳಿದ್ದೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್​​ಗೆ ಸೋಲಾಗಿತ್ತು. ಈ ಬಾರಿ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದೇವೆ. ಬಿಜೆಪಿ-ಜೆಡಿಎಸ್ ಜೊತೆಯಾಗಿ ಹೋಗಲು ತೀರ್ಮಾನ ಮಾಡಿದ್ದೇವೆ. ನಿಖಿಲ್ ಸ್ಪರ್ಧಿಸಬೇಕು ಎಂಬುದೇ ನಮ್ಮೆಲ್ಲರ ಒತ್ತಾಯ. ಮಂಡ್ಯ ಟಿಕೆಟ್‌ಗೆ ಮೊದಲ ಆದ್ಯತೆ ನಿಖಿಲ್ ಕುಮಾರಸ್ವಾಮಿಗೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES