Thursday, January 23, 2025

ಚೆನ್ನೈ ತಂಡದಿಂದ ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ ದೂರ

ಬೆಂಗಳೂರು : ಚೆನ್ನೈ ಸೂಪರ್ ಕಿಂಗ್ಸ್​ ತಂಡ ಪ್ರಮುಖ ಘೋಷಣೆ ಮಾಡಿದೆ. ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಹಾಗೂ ಸ್ಟಾರ್ ಆಲ್​ ರೌಂಡರ್ ಬೆನ್​ ಸ್ಟೋಕ್ಸ್​ ಅವರು ಐಪಿಎಲ್​-2024ಕ್ಕೆ ಲಭ್ಯವಿರುವುದಿಲ್ಲ ಎಂದು ಹೇಳಿದೆ.

ಕೆಲಸದ ಹೊರೆ ಹಾಗೂ ಫಿಟ್​ನೆಸ್​ನಿಂದಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಬೆನ್​ ಸ್ಟೋಕ್ಸ್​ ಹೇಳಿದ್ದಾರೆ. ಐಪಿಎಲ್​ಗಿಂದ ಮೊದಲು ಬೆನ್​ ಸ್ಟೋಕ್ಸ್​ ಭಾರತ ವಿರುದ್ಧ 5 ಟೆಸ್ಟ್ ಹಾಗೂ ಐಪಿಎಲ್ ನಂತರ ಟಿ-20 ವಿಶ್ವಕಪ್​ನಲ್ಲಿ ಆಡಲಿದ್ದಾರೆ.

ಕಳೆದ ಹರಾಜಿನಲ್ಲಿ ಬೆನ್​ ಸ್ಟೋಕ್ಸ್​ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಬರೋಬ್ಬರಿ 16.25 ಕೋಟಿ ರೂ.ಗೆ ಖರೀದಿಸಿತ್ತು. ಐಪಿಎಲ್​ನಲ್ಲಿ ರೈಸಿಂಗ್ ಪುಣೆ ಸೂಪರ್​ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಬೆನ್ ಸ್ಟೋಕ್ಸ್​ ಇದುವರೆಗೆ ಒಟ್ಟು 45 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 935 ರನ್ ಕಲೆಹಾಕಿದರೆ, 28 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ

ಎಂ.ಎಸ್​ ಧೋನಿ (ನಾಯಕ), ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ಅಜಿಂಕ್ಯ ರಹಾನೆ, ತುಷಾರ್ ದೇಶಪಾಂಡೆ, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಭಗತ್ ವರ್ಮಾ, ಅಜಯ್ ಮಂಡಲ್, ಕೈಲ್ ಜೇಮಿಸನ್, ನಿಶಾಂತ್ ಸಿಂಧು, ಶೇಕ್ ರಶೀದ್, ಸುಭ್ರಾಂಶು ಸೇನಾಪತಿ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್

RELATED ARTICLES

Related Articles

TRENDING ARTICLES