ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರ ಅನುಷ್ಠಾನ ಮಾಡಿ ಇದುರಿಗೂ ಆಗಿರುವ ಪ್ರಗತಿ ಹೇಗಿದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದೆ.
ಗೃಹಲಕ್ಷ್ಮೀ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ನವೆಂಬರ್ ತಿಂಗಳವರೆಗೆ 1.17 ಕೋಟಿ ಫಲಾನುಭವಿಗಳ ನೋಂದಣಿ ಮಾಡಲಾಗಿದೆ. ಈವರೆಗೆ 1.10 ಕೋಟಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದರು.
ಇದನ್ನೂ ಓದಿ: ಪಿಯು ಶಿಕ್ಷಣ ಇಲಾಖೆಯ ಘನತೆಯನ್ನು ಯಥಾಸ್ಥಿತಿ ಉಳಿಸವಂತೆ ಒತ್ತಾಯಿಸಿ ಸಿಎಂ ಗೆ ಮನವಿ!
2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ. ಬ್ಯಾಂಕ್ ಖಾತೆ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಹಲವು ಕಾರಣಗಳಿಂದ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ತೊಡಕಾಗಿದೆ. ಫಲಾನುಭವಿಗಳನ್ನು ಬ್ಯಾಂಕ್ಗೆ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದಿದ್ದಾರೆ.