Thursday, January 9, 2025

ನೂರಕ್ಕೆ ನೂರರಷ್ಟು ಡಿಕೆಶಿ ಜೈಲಿಗೆ ಹೋಗುತ್ತಾರೆ : ಕೆ.ಎಸ್​ ಈಶ್ವರಪ್ಪ

ಶಿವಮೊಗ್ಗ: ನೂರಕ್ಕೆ ನೂರರಷ್ಟು ಡಿ.ಕೆ ಶಿಮಕುಮಾರ್ ಜೈಲಿಗೆ ಹೋಗುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದರು. 

ನಗರದಲ್ಲಿ ಮಾತನಾಡಿದ ಅವರು,ಸಿಎಂ ಸಿದ್ದರಾಮಯ್ಯ ಹಿಂದುಳಿದವರಿಗೆ ದಲಿತರಿಗೆ ದ್ರೋಹ ಮಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​ ಅವರು ನ್ಯಾಯಲಯಕ್ಕೆ ಅಲೆಯುತ್ತಿದ್ದಾರೆ. ಸಚಿವ ಸಂಪುಟದ ಪಾವಿತ್ರ್ಯತೆ ಹಾಳು ಮಾಡುತ್ತಿದ್ದಾರೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್​ ವಿರುದ್ಧವಾಗಿ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿಕೆ ಶಿ‌ವಕುಮಾರ್​ ಜೈಲಿಗೆ ಹೋಗುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು. 

 ಇವರು ಎಲ್ಲಾದರಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ‌ಇದೊಂದು ಕಪ್ಪು ಚುಕ್ಕೆ. ಡಿಕೆ ಶಿವಕುಮಾರ್​ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡರು ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಕಿಡಿಕಾರಿದ್ದಾರೆ. 

RELATED ARTICLES

Related Articles

TRENDING ARTICLES