Sunday, December 22, 2024

ಲವ್ ಲೆಟರ್ ಬರೆದುಕೊಂಡಿದ್ದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲ್ಲ : ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ : ಅಧಿಕಾರಿಗಳು ಪ್ರತಿಯೊಂದು ಕೆಲಸಕ್ಕೂ ಲವ್ ಲೆಟರ್ ರೀತಿ ಪತ್ರಗಳನ್ನು ಬರೆದುಕೊಂಡಿದ್ದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್​ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿ ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಯೋಜನೆಗಳ ಪ್ರಗತಿ ಹಾಗೂ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ನಮಗೆ ನಿನ್ನೆಯಷ್ಟೇ ಬರ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸೂಚಿಸಿದ್ದಾರೆ. ಆದರೆ, ಅಧಿಕಾರಿಗಳು ಜನಪ್ರತಿನಿಧಿಗಳು ಮಾತನಾಡುವಾಗ ಅವರ ಕಿವಿಗೆ ಇವರು, ಇವರ ಕಿವಿಗೆ ಅವರು ಹೇಳಿಕೊಂಡು ಹಗುರವಾಗಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸಭೆಯಲ್ಲಿ ಶಾಸಕರಾದ ಸುನೀಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್, ಜಿ.ಪಂ ಸಿಇಒ ಪ್ರಸನ್ನ, ಡಿಎಫ್ ಒ ಗಣಪತಿ ಮತ್ತಿತರಿದ್ದರು.

RELATED ARTICLES

Related Articles

TRENDING ARTICLES