Wednesday, January 22, 2025

Bengaluru Kambala : ಇಂದಿನಿಂದ ಅರಮೆನೆ ಮೈದಾನದಲ್ಲಿ ಕಂಬಳ ಕಲರವ  

ಬೆಂಗಳೂರು: ಇಂದಿನಿಂದ ಬೆಂಗಳೂರು ಅರಮೆನೆ ಮೈದಾನದಲ್ಲಿ ಮೂರು ದಿನಗಳ ಕಾಲ ಕಂಬಳ ಪಂದ್ಯ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಕಂಬಳ ಕಾರ್ಯಕ್ರಮ ಉದ್ಘಾಟನೆ ಆಗಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕಂಬಳದಲ್ಲಿ 200ಕ್ಕೂ ಅಧಿಕ ಕೋಣಗಳು ಭಾಗಿಯಾಗಲಿವೆ. ಕಂಬಳಕ್ಕೆಂದೇ ರಾಜಮಹಾರಾಜ ಹೆಸರಿನ ಟ್ರ್ಯಾಕ್ ತಯಾರಾಗಿದೆ. 157 ಮೀಟರ್ ಉದ್ದ, 8 ಮೀಟರ್ ಅಗಲ ಟ್ರ್ಯಾಕ್ ಒಳಗೊಂಡಿದೆ. ಕಂಬಳ ವೀಕ್ಷಣೆಗೆ ಸುಮಾರು 6ರಿಂದ 7 ಲಕ್ಷ ಜನರು ಬರುವ ಸಾಧ್ಯತೆ ಇದೆ.

200ಕ್ಕೂ ಹೆಚ್ಚು ಕೋಣಗಳು ಕಂಬಳದಲ್ಲಿ ಭಾಗವಹಿಸಲಿವೆ. ವೀಕೆಂಡ್​ನಲ್ಲಿ ಕಂಬಳವಿರುವುದರಿಂದ ವೀಕ್ಷಣೆಗೆ 6 ರಿಂದ 7 ಲಕ್ಷ ಜನ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ: Bengaluru Kambala: ಕಂಬಳದಲ್ಲಿ ಗೆಲ್ಲುವ ಕೋಣಗಳಿಗೆ ಬಹುಮಾನವೆಷ್ಟು ಗೊತ್ತಾ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದಕ್ಕಾಗಿ ಸಕಲ ತಯಾರಿ ಮಾಡಲಾಗಿದ್ದು, ಜನರು ಕೂತು ಕಂಬಳ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕೋಣಗಳಿಗೂ ಸೂಕ್ತ ಜಾಗ, ಮೇವು, ನೀರಿನ ವ್ಯವಸ್ಥೆ ಮಾಡಲಾಗಿದೆ

ಕಂಬಳಕ್ಕೆ 77.50- 78 ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆಯಿದ್ದು, ಸರ್ಕಾರ ಒಂದು ಕೋಟಿ ರೂ. ಅನುದಾನ ಪ್ರಕಟಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಹಣ ಸಹಾಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.

RELATED ARTICLES

Related Articles

TRENDING ARTICLES