Wednesday, January 22, 2025

ಅವಹೇಳನಕಾರಿ ಹೇಳಿಕೆ : ‘ತ್ರಿಶಾ ಅವರೇ ನನ್ನನ್ನು ಕ್ಷಮಿಸಿ’ ಎಂದ ಖಳನಟ ಮನ್ಸೂರ್ ಅಲಿ ಖಾನ್

ಬೆಂಗಳೂರು : ನಟಿ ತ್ರಿಶಾ ಕೃಷ್ಣನ್ ಬಗ್ಗೆ ಅವಹೇಳನಕಾರಿ ಮಾತನಾಡಿ ತೀವ್ರ ಟೀಕೆಗೊಳಗಾಗಿದ್ದ ತಮಿಳು ಖಳ ನಟ ಮನ್ಸೂರ್ ಅಲಿ ಖಾನ್​ಗೆ ಕೊನೆಗೂ ಜ್ಞಾನೋದಯವಾಗಿದೆ. ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಅವರು ತ್ರಿಶಾ ಬಳಿ ಕ್ಷಮೆಯಾಚಿಸಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾದ ಬಗ್ಗೆ ನಟ ಮನ್ಸೂರ್ ಅಲಿ ಖಾನ್ ಮಾತನಾಡುತ್ತ ತ್ರಿಷಾ ಬಗ್ಗೆ ಕೀಳು ಅಭಿರುಚಿಯ ಮಾತುಗಳನ್ನು ಹೇಳಿದ್ದರು. ಇದನ್ನು ನಟಿ ತ್ರಿಶಾ ಸೇರಿದಂತೆ ಸಿನಿಮಾ ರಂಗದ ಗಣ್ಯರು ಖಂಡಿಸಿದ್ದರು.

ಘಟನೆ ಕುರಿತಂತೆ ಮಹಿಳಾ ಆಯೋಗ ಮನ್ಸೂರ್ ಅಲಿ ಖಾನ್ ಅವರಿಗೆ ನೋಟಿಸ್ ನೀಡಿತ್ತು. ಇವರ ವಿರುದ್ಧ ಚೆನ್ನೈನಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ನಂತರ ಮನ್ಸೂರ್ ಅಲಿ ಖಾನ್ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಮನ್ಸೂರ್ ಅಲಿ ಖಾನ್ ಅವರು ನಟಿ ತ್ರಿಶಾ ಅವರಲ್ಲಿ ಕ್ಷಮೆ ಕೇಳಿದ್ದಾರೆ. ಸಿನಿಮಾರಂಗದ ಟ್ರೇಡ್ ಅನಲಿಸ್ಟ್ ರಮೇಶ್ ಬಾಲಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ತ್ರಿಷಾ ಅವರೇ ನನ್ನನ್ನು ಕ್ಷಮಿಸಿ ಎಂದು ಹೇಳಿದ್ದಾರೆ ಎಂದು ಬಾಲಾ ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES