ಬೆಂಗಳೂರು : ಚೀನಾದಲ್ಲಿ ಕಾಣಿಸಿಕೊಂಡಿರುವ ನಿಗೂಢ ಸ್ವರೂಪದ ನ್ಯುಮೋನಿಯಾ H9N2 ಸೋಂಕು ಹಲವು ದೇಶಗಳ ಆತಂಕ ಹೆಚ್ಚಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯ ಈ ಪ್ರಕರಣದ ಕುರಿತು ತೀವ್ರ ನಿಗಾವಹಿಸಲು ಸೂಚನೆ ನೀಡಿದೆ.
ಈ ಸೋಂಕಿನಿಂದ ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಪ್ರಕರಣದ ಗಂಭೀರತೆಯನ್ನು ಅರಿತಿರುವ ಭಾರತ ಸರ್ವ ಸನ್ನದ್ಧವಾಗಿದೆ. ಮುನ್ನಚ್ಚೆರಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದೆ.
ಭಾರತ ಯಾವುದೇ ತುರ್ತು ಪರಿಸ್ಥಿತಿಗೆ ಸಜ್ಜಾಗಿದೆ. ಆರೋಗ್ಯ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಭಾರತದಲ್ಲಿ ಈ ಸೋಂಕು ಹರಡುವ ಸಾಧ್ಯತೆಗಳು ಕ್ಷೀಣ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇದೇ ವೇಳೆ ಕೇಂದ್ರ ಆರೋಗ್ಯ ಇಲಾಖೆ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಸಚಿವಾಲಯಕ್ಕೆ ಎಚ್ಚರಿಕೆ ನೀಡಿದೆ. ಪ್ರಕರಣದ ಕುರಿತು ತೀವ್ರ ನಿಗಾ ವಹಿಸುವಂತೆ ಸೂಚಿಸಿದೆ.