Sunday, December 22, 2024

ಅರಮನೆ ಮೈದಾನದಲ್ಲಿ ಇಂದು, ನಾಳೆ ಐತಿಹಾಸಿಕ ಕಂಬಳ ಕಲರವ 

ಬೆಂಗಳೂರು: ಇಂದು, ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಐತಿಹಾಸಿಕ ಕಂಬಳ ನಡೆಯಲಿದೆ. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಹೆಸರಿನಲ್ಲಿ ಕಂಬಳ ನಡೆಯುತ್ತಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಇಂದು ಬೆಳಗ್ಗೆ 10.30ಕ್ಕೆ ಐತಿಹಾಸಿಕ ಕಂಬಳದ ಜೋಡು ಕರೆ ಉದ್ಘಾಟನೆ ಮಾಡಲಿದ್ದಾರೆ.

ಅರಮನೆ ಮೈದಾನದ ಗೇಟ್ ನಂ.1, 2, 3, 4ರಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರಲಿದೆ. ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕವಾಗಿ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಇಂದಿನಿಂದ ಅರಮೆನೆ ಮೈದಾನದಲ್ಲಿ ಕಂಬಳ ಕಲರವ  

ಕಂಬಳ ಅಖಾಂಡಕ್ಕೆ 228 ಜೋಡಿ ಕೋಣಗಳು ರೆಡಿ

ಕಂಬಳದಲ್ಲಿ ಭಾಗವಹಿಸಲು ಈಗಲೇ 228 ಜೋಡಿ ಕೋಣಗಳು ನೋಂದಣಿಯಾಗಿವೆ.ಅಖಾಂಡಕ್ಕೆ 228 ಜೋಡಿ ಕೋಣಗಳು ಇಳಿಯಲಿವೆ. ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ 77.50- 78 ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆಯಿದ್ದು, ಸರ್ಕಾರ ಒಂದು ಕೋಟಿ ರೂ. ಅನುದಾನ ಪ್ರಕಟಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಹಣ ಸಹಾಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕೈಜೋಡಿಸಿವೆ

RELATED ARTICLES

Related Articles

TRENDING ARTICLES