Sunday, December 22, 2024

ಸಿಬಿಐ ತನಿಖೆಗೆ ಡಿಕೆಶಿ ಹಿಂದೇಟೇಕೆ ; ಶಾಸಕ ಅಶ್ವತ್ ನಾರಾಯಣ ಪ್ರಶ್ನೆ

ಕಲಬುರಗಿ: ಡಿ.ಕೆ. ಶಿವಕುಮಾರ್ ಅವರು ಆದಾಯಕ್ಕೆ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದೆ. ಇದೀಗ ತನಿಖೆಗೆ ನೀಡಿದ್ದ ಅನುಮತಿಯನ್ನು ಅವರದೇ ಸರ್ಕಾರ ವಾಪಸ್ ಪಡೆದಿದೆ. ಹೆಚ್ಚು ಆದಾಯ ಗಳಿಸಿಲ್ಲವಾದರೆ ಶಿವಕುಮಾರ್ ತನಿಖೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಶಾಸಕ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಅವರು, ಕಳ್ಳನಿಗೊಂದು ಪಿಳ್ಳೆ ನೆವ ಎಂಬಂತೆ ಸಿಬಿಐ ತನಿಖೆಗೆ ಅನುಮತಿ ನೀಡುವಾಗ ಸ್ಪೀಕರ್ ಅನುಮತಿ ಪಡೆದಿಲ್ಲ ಎಂದು ಸರ್ಕಾರ ವಾದ ಮಾಡುತ್ತದೆ. ಕಾನೂನು ಪ್ರಕ್ರಿಯೆ ಸರಿಯಾಗಿ ನಡೆಯದಿದ್ದರೆ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೇ ಅಂಗೀಕರಿಸುತ್ತಿರಲಿಲ್ಲ ಎಂದರು.

ನಮ್ಮ ಸರ್ಕಾರ ಸಿಬಿಐಗೆ ವಹಿಸಿರುವುದರಲ್ಲಿ ಯಾವುದೇ ರೀತಿ ಕಾನೂನು ಉಲ್ಲಂಘನೆ ಆಗಿಲ್ಲ ಹಾಗೇನಾದ್ರೂ ಆಗಿದ್ದರೆ ನ್ಯಾಯಾಲಯದಲ್ಲಿ ಇವರು ವಾದ ಮಾಡಬೇಕಿತ್ತು. ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ವರ್ತಿಸುತ್ತದೆ ಈ ವಿಚಾರದಲ್ಲಿ ತಪ್ಪು ಆಗಿದ್ದರೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಬೇಕಿತ್ತು.. ಏಕೆ ನ್ಯಾಯಾಲಯಕ್ಕೆ ಹೋಗಿಲ್ಲ ? ನಾವು ಅಧಿಕಾರದಲ್ಲಿದ್ದಾಗ ಎಲ್ಲವೂ ಕಾನೂನು ಪ್ರಕಾರವಾಗಿ ಕೆಲಸ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಬೆಳಗಾವಿ ದಂಡು ಮಂಡಳಿ ಸಿಇಒ ನಿಗೂಢ ಸಾವು

ನಾವು ಕಾನೂನು ಉಲ್ಲಂಘನೆ ಮಾಡಿದ್ದರೆ ನ್ಯಾಯಾಲಯ ಅದನ್ನು ಐದೇ ನಿಮಿಷದಲ್ಲಿ ತಿರಸ್ಕಾರ ಮಾಡುತ್ತಿತ್ತು

ಈ ಹಿಂದೆಯೂ ಹಲವು ಸಿಬಿಐ ಕೇಸ್ ಗಳನ್ನು ಬೇರೆ ಬೇರೆ ಸರ್ಕಾರಗಳು ಹಿಂದೆ ಪಡೆಯಲು ಪ್ರಯತ್ನಿಸಿ ವಿಫಲವಾಗಿವೆ ಹಾಗಾಗಿ ಈ ವಿಚಾರದಲ್ಲೂ ಸಿಬಿಐ ತನಿಖೆಯೇ ಮುಂದುವರೆಯುತ್ತೆ ಸತ್ಯಕ್ಕೆ, ನ್ಯಾಯಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದರು.

ಡಿಕೆ ಶಿಮಕುಮಾರ್ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆ ಎನ್ನುವುದು ಕೇಸಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಎಲ್ಲಿಂದ ಗಳಿಕೆಯಾಗಿದೆ ? ಎಲ್ಲಿಂದ ಬಂತು ? ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.ಇದಕ್ಕೆ ಉತ್ತರ ಕೊಡಬೇಕು.. ಯಾಕೆ ಹೆದರಿಕೊಳ್ಳುತ್ತಿದ್ದೀರಿ ? ಯಾಕೆ ಓಡಿ ಹೋಗುತ್ತಿದ್ದೀರಿ ? ಬೀಸೋ ದೊಣ್ಣೆ ತಪ್ಪಿಸಿಕೊಂಡರೆ ನೂರು ವರ್ಷ ಆಯಸ್ಸು ಅನ್ನೋ ರೀತಿಯಲ್ಲಿ ತಪ್ಪಿಸಿಕೊಳ್ಳೋ ಪ್ರಯತ್ನ ಮಾಡುತ್ತಿದ್ದೀರಿ ಇದು ಸರಿಯಲ್ಲ
ಡಿಸಿಎಂ ಡಿಕೆ ಶಿವಕುಮಾರಗೆ, ಮಾಜಿ ಡಿಸಿಎಂ ಅಶ್ವಸ್ಥನಾರಾಯಣ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರೀ ಭ್ರಷ್ಟಾಚಾರದಲ್ಲೇ ತೊಡಗಿದೆಹಾಗಾಗಿ ಈ ಕೇಸನ್ನೂ ಸಿಬಿಐ ತನಿಖೆಯಿಂದ ಹಿಂಪಡೆಯಲು ಮುಂದಾಗಿದೆ  ಎಂದು ಗುಡುಗಿದ್ದಾರೆ.

RELATED ARTICLES

Related Articles

TRENDING ARTICLES