Sunday, December 22, 2024

ಭಾರತ-ಆಸಿಸ್ 2ನೇ ಟಿ-20 ಪಂದ್ಯ : ಆಸಿಸ್ ಬಗ್ಗುಬಡಿಯುತ್ತಾ ‘SKY’ ಪಡೆ

ಬೆಂಗಳೂರು : ಇಂದು ತಿರುವನಂತಪುರಂ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಟಿ-20 ಪಂದ್ಯ ನಡೆಯಲಿದೆ.

5 ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿದೆ. ಇಂದಿನ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಕಾಯ್ದುಕೊಳ್ಳಲು ಸೂರ್ಯಕುಮಾರ್ ಯಾದವ್ ನೇತೃತ್ವದ ಯುವ ಪಡೆ ಸಜ್ಜಾಗಿದೆ.

ಇನ್ನೂ ಆಸಿಸ್​ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಭಾರತದ ಬೌಲರ್‌ಗಳು ನೀರಸ ಪ್ರದರ್ಶನ ನೀಡಿದ್ದರು. ವೇಗಿ ಮುಖೇಶ್ ಕುಮಾರ್ ಹೊರತು ಪಡಿಸಿ ಬೇರೆ ಯಾವ ಬೌಲರ್​ಗಳು ಸಹ ಆಸಿಸ್​ ರನ್ ವೇಗಕ್ಕೆ ಕಡಿವಾಣ ಹಾಕಿರಲಿಲ್ಲ. ಹೀಗಾಗಿ,ಇಂದಿನ ಪಂದ್ಯದಲ್ಲಿ ಬೌಲಿಂಗ್ ವಿಭಾಗದಲ್ಲಿ ಕೆಲ ಬದಲಾವಣೆ ಮಾಡುವ ಸಾಧ್ಯತೆಯಿದೆ.

ಭಾರತ ಸಂಭಾವ್ಯ ತಂಡ

ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ ಸಂಭಾವ್ಯ ತಂಡ

ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ನಾಯಕ & ವಿಕೆಟ್ ಕೀಪರ್), ಸೀನ್ ಅಬಾಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್‌ಡಾರ್ಫ್, ಆಡಂ ಝಂಪಾ.

RELATED ARTICLES

Related Articles

TRENDING ARTICLES