Monday, December 23, 2024

ಓಟದ ಸ್ಫರ್ಧೆಯಲ್ಲಿ ಬಹುಮಾನ ಸಿಗದ ಕಾರಣಕ್ಕೆ ಯುವತಿ ಆತ್ಮಹತ್ಯೆ!

ಮಂಗಳೂರು: ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪ್ಯದಲ್ಲಿ ನಡೆದಿದೆ.

ನಿಶಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ ನಿಶಾ ಖಿನ್ನತೆಗೊಳಗಾಗಿದ್ದಳು. ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಈಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆದ 1 ವಾರದ ಹಿಂದೆಯೇ ನಿಶಾ ವಿಷ ಸೇವಿಸಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ:  ಹರಿಯಾಣದ ಸೋನಿಪತ್​ನಲ್ಲಿ ಲಘು ಭೂಕಂಪ!

ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್‌ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು. ಇದರಿಂದ ಖಿನ್ನತೆಗೊಳದ ಆಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಗಮನಿಸಿದ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES