Wednesday, January 22, 2025

ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ : ಮ್ಯಾಕ್ಸಿ, ಝಂಪಾ ಕಂಬ್ಯಾಕ್

ಬೆಂಗಳೂರು : ಭಾರತ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ತಿರುವನಂತಪುರಂ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. 5 ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿದೆ. ಇಂದಿನ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಕಾಯ್ದುಕೊಳ್ಳಲು ಭಾರತೀಯ ಯುವ ಪಡೆ ಸಜ್ಜಾಗಿದೆ.

ಮ್ಯಾಕ್ಸಿ, ಝಂಪಾ ಕಂಬ್ಯಾಕ್

ಆಸ್ಟ್ಟೇಲಿಯಾ ತಂಡದಲ್ಲಿ ಇಂದು ಪ್ರಮುಖ ಬದಲಾವಣೆ ಮಾಡಲಾಗಿದೆ. ಸ್ಟಾರ್ ಆಲ್​ ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಆಡಂ ಝಂಪಾ ತಂಡವನ್ನು ಕೂಡಿಕೊಂಡಿದ್ದಾರೆ. ಮ್ಯಾಕ್ಸಿ ಆಗಮನದಿಂದ ಆಸಿಸ್ ಪಡೆಗೆ ಆನೆ ಬಲ ಬಂದಂತಾಗಿದೆ.

ಭಾರತ ಸಂಭಾವ್ಯ ತಂಡ

ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ ಸಂಭಾವ್ಯ ತಂಡ

ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ನಾಯಕ & ವಿಕೆಟ್ ಕೀಪರ್), ಸೀನ್ ಅಬಾಟ್, ನಾಥನ್ ಎಲ್ಲಿಸ್, ತನ್ವಿರ್ ಸಂಘ, ಆಡಂ ಝಂಪಾ.

RELATED ARTICLES

Related Articles

TRENDING ARTICLES