Wednesday, January 22, 2025

ಕಂಬಳ ನೋಡಿ ವಾಪಸಾಗುವಾಗ ಕಾರು-ಲಾರಿ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು

ತುಮಕೂರು: ಬೆಂಗಳೂರು ಕಂಬಳ ನೋಡಿ ವಾಪಸಾಗುವಾಗ ವೇಳೆ ಕಾರು-ಡಿಕ್ಕಿಯಾಗಿ ಇಬ್ಬರೂ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕುಣಿಗಲ್‌ ತಾಲೂಕಿನ ಚಿಗಣಿಪಾಳ್ಯ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ

ನಿನ್ನೆ ರಾತ್ರಿ ಕಂಬಳ ನೋಡಿದ ಐವರು ಕಾರಿನಲ್ಲಿ ಮಂಗಳೂರಿಗೆ ವಾಪಸಾಗುತ್ತಿದ್ದರು. ಇದೇ ವೇಳೆ ಕಾರು ಹಾಗೂ ಬೋರ್‌ವೆಲ್‌ ಕೊರೆಯುವ ಲಾರಿ ಡಿಕ್ಕಿಯಾಗಿವೆ. ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ವಾಸಿ ಕಿಶಾನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ವಾಸಿ ಫಿಲಿಪ್ ನೇರಿ‌ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಣಿಗಲ್‌ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ವಿವರ

ಐವರು ಕಂಬಳ ವೀಕ್ಷಿಸಲೆಂದೇ ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದರು. ಕಂಬಳ ವೀಕ್ಷಿಸಿದ ಬಳಿಕ ಅವರು ಮಂಗಳೂರಿಗೆ ತೆರಳುತ್ತಿದ್ದರು. ಆದಾಗ್ಯೂ, ಅಪಘಾತ ಸಂಭವಿಸುತ್ತಲೇ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಕಾರು ನಜ್ಜುಗುಜ್ಜಾಗಿದೆ. ಹಾಗಾಗಿಯೇ, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 

 

 

RELATED ARTICLES

Related Articles

TRENDING ARTICLES