Wednesday, January 22, 2025

ಮುಂಬೈ ಭಯೋತ್ಪಾದಕ ದಾಳಿ: ಇಂದಿಗೆ 15 ವರ್ಷ !

ಮುಂಬೈ: ಮುಂಬೈನ ತಾಜ್ ಹೋಟೆಲ್ ಮೇಲೆ ಭಯೋತ್ಪಾದಕ ದಾಳಿ ನಡೆದು ನ.26ಕ್ಕೆ ಇಂದಿಗೆ ಹದಿನೈದು ವರ್ಷಗಳು ಕಳೆದಿದೆ. ಈ ದಾಳಿಯಲ್ಲಿ 166 ಮಂದಿ ಗುಂಡಿನ ದಾಳಿಗೆ ಬಲಿಯಾಗಿದ್ದರು.

ಹತ್ತು ಮಂದಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಗುಂಪಿನ ಭಯೋತ್ಪಾದಕರು 2008ರ ನವೆಂಬರ್ 26ರಂದು ರಾತ್ರಿ ಮುಂಬೈ ನಗರವನ್ನು ಪ್ರವೇಶಿಸಿದ್ದರು. ಏಕಾಏಕಿ ನಡೆಸಿದ ಗುಂಡಿನ ದಾಳಿಯಲ್ಲಿ 166 ಜನರು ಮೃತಪಟ್ಟು 300 ಜನರು ಗಾಯಗೊಂಡಿದ್ದರು.

ತಾಜ್ ಮತ್ತು ಒಬೆರಾಯ್ ಹೊಟೇಲ್‌ಗಳು, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್, ನಾರಿಮನ್ ಹೌಸ್‌ನಲ್ಲಿ ಗರಿಷ್ಠ ಪ್ರಮಾಣದಲ್ಲಿ ಜನಸಂದಣಿ ಇರುವುದರ ಬಗ್ಗೆ ಸಮೀಕ್ಷೆ ನಡೆಸಿದ ನಂತರವೇ ಯೋಜಿತ ದಾಳಿ ನಡೆಸಲಾಗಿತ್ತು.

ಇದನ್ನೂ ಓದಿ: ತನ್ನಿಬ್ಬರು ಮಕ್ಕಳನ್ನು ಬಸ್​ ಸ್ಟಾಪ್​ ನಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿದ ಮಹಿಳೆ!

ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ 10 ಭಯೋತ್ಪಾದಕರ ಪೈಕಿ 9 ಮಂದಿ ಛತ್ರಪತಿ ಶಿವಾಜಿ ಟರ್ಮಿನಲ್‌ ರೈಲ್ವೇ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದರು. ಬದುಕುಳಿದಿದ್ದ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ‘ಮೊಹಮ್ಮದ್ ಅಜ್ಜಲ್ ಅಮೀರ್ ಕಸಬ್’ಗೆ 2010ರಲ್ಲಿ ಮರಣದಂಡನೆ ವಿಧಿಸಿ. 2012ರಲ್ಲಿ ಪುಣೆಯಲ್ಲಿ ಗಲ್ಲಿಗೇರಿಸಲಾಯಿತು. 2008ರ ಈ ದುರಂತಕ್ಕೆ 15 ವರ್ಷಗಳು ಕಳೆದಿವೆ.

RELATED ARTICLES

Related Articles

TRENDING ARTICLES