Friday, September 20, 2024

ಪಿಂಚಣಿ ವಿವಾದ: ಮೊದಲನೇ ಪತ್ನಿ ಬದುಕಿದ್ದಾಗ ಎರಡನೇ ಪತ್ನಿ ಪಿಂಚಣಿಗೆ ಅರ್ಹಳಲ್ಲ!

ಬೆಂಗಳೂರು: ಪಿಂಚಣಿ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ಮೃತ ಸರ್ಕಾರಿ ನೌಕರನ ಮೊದಲನೇ ಪತ್ನಿ ಬದುಕಿದ್ದಾಗಲೇ ಎರಡನೇ ಪತ್ನಿಗೆ ಪಿಂಚಣಿ ಪಡೆಯುವ ಅಧಿಕಾರವಿಲ್ಲ ಎಂದು ಪಿ.ಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್​. ದೀಕ್ಷಿತ್​ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ 2ನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಮುಖ್ಯನ್ಯಾಯಮೂರ್ತಿಗಳು ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಅಧಿಕಾರವಿದೆ. ಮೊದಲನೇ ಪತ್ನಿ ಬದುಕಿದ್ದಾಗ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಹಾಗಾಗಿ ಎರಡನೇ ಪತ್ನಿಗೆ ಪಿಂಚಣಿಯ ಹಕ್ಕಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ಮುಂಬೈ ಭಯೋತ್ಪಾದಕ ದಾಳಿ: ಇಂದಿಗೆ 15 ವರ್ಷ !

ಪ್ರಕರಣದ ಹಿನ್ನೆಲೆ  :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಂಜುಂಡಪ್ಪ ಎಂಬುವರು ಕಾರ್ಯನಿರ್ವಹಿಸುತ್ತಿದ್ದರು. ಅವರ ಮೊದಲನೇ ಪತ್ನಿಗೆ ನಿಯಮದಂತೆ ಕೌಟುಂಬಿಕ ಪಿಂಚಣಿ ನೀಡಲಾಗುತ್ತಿತ್ತು. ಆದರೆ ಎರಡನೇ ಪತ್ನಿ ಅರ್ಜಿ ಸಲ್ಲಿಸಿ ತಾವು ಎರಡನೇ ಪತ್ನಿಯಾಗಿದ್ದರೂ ಕೌಟುಂಬಿಕ ಪಿಂಚಣಿ ಅರ್ಹರಾಗಿದ್ದು, ತಮಗೆ ಪಿಂಚಣಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು.

ಆದರೆ, ಇಲಾಖೆ ಅವರ ಮನವಿಯನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಏಕಸದಸ್ಯಪೀಠದ ಮೊರೆ ಹೋಗಿದ್ದರು. ಏಕಸದಸ್ಯಪೀಠವೂ ಸಹ ಆರ್‌ಡಿಪಿಆರ್ ಕ್ರಮವನ್ನು ಎತ್ತಿಹಿಡಿದು, ಪಿಂಚಣಿ ನೀಡಲು ಸಾಧ್ಯವಿಲ್ಲವೆಂದು ಆದೇಶಿಸಿತ್ತು. ಹಾಗಾಗಿ ಅರ್ಜಿದಾರರು ವಿಭಾಗೀಯಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ದ್ವಿಪತ್ನಿತ್ವ ಅಪರಾಧ:

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, “ಕೌಟುಂಬಿಕ ಪಿಂಚಣಿಯನ್ನು ನಿಯಮದ ಪ್ರಕಾರ ‘ಪತ್ನಿ’ಗೆ ನೀಡಲಾಗುವುದು. ಆದರೆ ಎರಡನೇ ಪತ್ನಿಯ ಮದುವೆ ಕಾನೂನಿನ ಕಣ್ಣಲ್ಲಿ ಮದುವೆಯೇ ಅಲ್ಲ. ಹಾಗಾಗಿ ಹಿಂದೂ ವಿವಾಹ ಕಾಯಿದೆ 1955ರ ಪ್ರಕಾರ ದ್ವಿಪತ್ನಿತ್ವ ಅಪರಾಧವಾಗುತ್ತದೆ’ ಎಂದು ಆದೇಶಿಸಿದೆ. ಅರ್ಜಿದಾರರು ಕಾನೂನು ಬದ್ಧವಾಗಿ ಮದುವೆಯಾದ ಪತ್ನಿಯಲ್ಲ ಹಾಗಾಗಿ ಪಿಂಚಣಿ ನೀಡಲಾಗದು ಎಂದು ಆದೇಶ ನೀಡಿದೆ.

RELATED ARTICLES

Related Articles

TRENDING ARTICLES