Friday, May 17, 2024

ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಇಂದು ಸಂವಿಧಾನ ಅಂಗೀಕರಾವಾದ ದಿನ. 1949,ರ ನವೆಂಬರ್ 26 ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದರು.

ಇದನ್ನೂ ಓದಿ: ಪಿಂಚಣಿ ವಿವಾದ: ಮೊದಲನೇ ಪತ್ನಿ ಬದುಕಿದ್ದಾಗ ಎರಡನೇ ಪತ್ನಿ ಪಿಂಚಣಿಗೆ ಅರ್ಹಳಲ್ಲ!

ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ :

ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದರು.

ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯುತ್ತಿದೆ :

ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ ಅವರು ಕನಸು ಕಂಡಿದ್ದರು. ನಮ್ಮ ಸರ್ಕಾರದ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದರು.

RELATED ARTICLES

Related Articles

TRENDING ARTICLES