Saturday, November 2, 2024

ಗ್ಯಾರಂಟಿ ಯೋಜನೆಗೆ ಹಣ ಕೊಟ್ಟು ಸಿದ್ದು ಸರ್ಕಾರ ಪಾಪರ್ ಆಗಿದೆ: ಆರ್‌. ಅಶೋಕ್

ಬೆಂಗಳೂರು: ಗ್ಯಾರಂಟಿ ಯೋಜನೆಗೆ ಹಣ ನೀಡಿ ರಾಜ್ಯ ಸರ್ಕಾರ ಪೇವರ್ ಆಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್​. ಅಶೋಕ್ ಕಿಡಿಕಾರಿದ್ದಾರೆ.

ನಗರದಲ್ಲಿ  ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದ ತೀರ್ಮಾನ ಅಕ್ರಮ, ಅನ್ಯಾಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿದ್ದವರು. ಈ ರೀತಿಯ ತೀರ್ಮಾನಕ್ಕೆ ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಸೋನಿಯಾ, ರಾಹುಲ್‌, ಸುರ್ಜೆವಾಲಾ ಒತ್ತಡದಿಂದಾಗಿ ಒಪ್ಪಿದ್ದಾರೆ ಎಂದು ಕಿಡಿಕಾರಿದರು.

ಈ ತೀರ್ಮಾನ ಇಡೀ ಸಂಪುಟಕ್ಕೆ ಕಪ್ಪು ಚುಕ್ಕೆ, ಡಿಕೆಶಿ ರಕ್ಷಣೆಗಾಗಿಯೇ ವಿಶೇಷ ಸಂಪುಟ ಸಭೆ ನಡೆದಿದೆ. ಎಲ್ಲವನ್ನೂ ರಹಸ್ಯವಾಗಿ ಸಿದ್ಧಪಡಿಸಿಕೊಂಡು ಏಕಾಏಕಿ ಘೋಷಣೆ ಮಾಡಿದ್ದಾರೆ. ನ್ಯಾಯಾಂಗಕ್ಕೆ ಮಣ್ಣೆರಚುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡಿದೆ.

ಇದನ್ನೂ ಓದಿ: 900 ಹೆಣ್ಣು ಭ್ರೂಣ ಹತ್ಯೆ: 2 ವೈದ್ಯರ ಸಹಿತ 9 ಮಂದಿ ಅರೆಸ್ಟ್

ಸಿಬಿಐ ಶೇ.70ರಷ್ಟು ತನಿಖೆ‌ ಮುಗಿಸಿದ ವೇಳೆ ವಾಪಸ್ ಗೆ ನಿರ್ಧಾರ. ಡಿಕೆಶಿ ಸದಸ್ಯರಾಗಿರುವ ಸಂಪುಟದಲ್ಲಿ ಅವರ ಪರ ತೀರ್ಮಾನ, ಡಿಕೆಶಿ ಸಂಪುಟ ಸಭೆಯಲ್ಲಿ ಇರಲಿಲ್ಲ ಎಂಬುದು ಲೆಕ್ಕ ಅಲ್ಲ. ಈ ರೀತಿಯ ಪ್ರಕರಣಗಳಲ್ಲಿ ಹಿಂದೆ ಕೋರ್ಟ್ ಛೀಮಾರಿ ಹಾಕಿದ್ದಿದೆ. ಬಿಜೆಪಿ ಆಡಳಿತದಲ್ಲಿ ಅಕ್ರಮವಾಗಿ ಡಿಕೆಶಿ ಕೇಸ್ ಸಿಬಿಐಗೆ ನೀಡಿದ ಆರೋಪ‌ ವಿಚಾರಕ್ಕೆ ತಿರುಗೇಟು ನೀಡಿದರು.

 

RELATED ARTICLES

Related Articles

TRENDING ARTICLES