Sunday, December 22, 2024

ವಿವಿಧ ರಾಶಿಗಳ ಇಂದಿನ ಭವಿಷ್ಯ ಹೇಗಿದೆ ಗೊತ್ತಾ ? ಇಲ್ಲಿದೆ ಮಾಹಿತಿ

ವಾರದ ಆರಂಭಿಕ ದಿನವಾದ ಇಂದು ವಿವಿಧ ರಾಶಿಗಳ ಭವಿಷ್ಯ ಹೇಗಿದೆ ಎನ್ನುವುದನ್ನು ಇಂದು ತಿಳಿಯೋಣ.

ಮೇಷ: ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಹೆಚ್ಚಾಗಲಿದೆ. ನಿಮ್ಮ ಆಪ್ತರೇ ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ.

ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗಲಿದೆ. ಪ್ರೀತಿಪಾತ್ರರ ಜತೆಗೆ ವಾದಕ್ಕೆ ಕಾರಣವಾಗಬಹುದಾದ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಿ.

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಆಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಅಂತಹವರಿಂದ ಎಚ್ಚರಿಕೆಯಿಂದ ಇರಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿ ಯಶಸ್ವಿ ಪಡೆಯುವ ದಿನ. ಭೂಮಿ ಸಂಬಂಧಿ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಸಂತೋಷದ ದಿನ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ ಇದೆ. ಮಾತಿನಲ್ಲಿ ಹಿಡಿತವಿರಲಿ.ಕೌಟುಂಬಿಕವಾಗಿ ಮಿಶ್ರ ಫಲ.

ತುಲಾ: ಒತ್ತಡ ತುಂಬಿದ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಲಾಭ ಸಿಗಲಿದೆ. ಕುಟುಂಬ ಸಮೇತ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಆರ್ಥಿಕವಾಗಿ ಪ್ರಗತಿ.ಕೌಟುಂಬಿಕವಾಗಿ ಶುಭ ಫಲ.

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಇರಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಜಾಸ್ತಿ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ.ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.

 

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ.ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಇಲ್ಲದ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಇದರಿಂದಾಗಿ ಟೀಕೆಗಳನ್ನು ಎದಿರಿಸಬೇಕಾದಿತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.

 

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ.ಕೌಟುಂಬಿಕವಾಗಿ ಶುಭ ಫಲ.

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಆರ್ಥಿಕವಾಗಿ ಸದೃಢ ಇರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.

RELATED ARTICLES

Related Articles

TRENDING ARTICLES