Friday, November 22, 2024

ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಸ್​ಬುಕ್ ಖಾತೆ ಹ್ಯಾಕ್ : ದೂರು ದಾಖಲು

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು, ಪೊಲೀಸ್ ಅಧಿಕಾರಿಗಳು, ಸಿನಿಮಾ ತಾರೆಗಳ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಆಂದ್ರೆ ಇದೀಗ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದೆ ಎಂದು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಚಾಲಕರಾದ ಜೆ.ಡಿ.ಮಂಜುನಾಥ್ ಎಂಬುವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ”ಶ್ರೀ ಮಧು ಬಂಗಾರಪ್ಪ ಜೀ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು” ಎಂಬ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆಯಲಾಗಿದೆ.

ಇದರ ಡಿಪಿಗೆ ಮಧು ಬಂಗಾರಪ್ಪ ಅವರ ಫೋಟೊ ಹಾಕಿದ್ದಾರೆ. ಈ ನಕಲಿ ಖಾತೆಗೆ 58 ಸಾವಿರ ಜನ ಫಾಲೋ ಮಾಡುತ್ತಿದ್ದಾರೆ. ಕುಂದಾಪುರ ವಿರಾಟ್ ಎಂಬ ಹೆಸರಿನ ಫೇಸ್‌ಬುಕ್ ಬಳಕೆದಾರರು ಸದರಿ ಗ್ರುಪ್‌ನಲ್ಲಿ ಇದ್ದಾರೆ. ಈ ನಕಲಿ ಫೇಸ್‌ಬುಕ್ ಖಾತೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರುಗಳನ್ನು ಅವಹೇಳನ ಮಾಡಲಾಗುತ್ತಿದೆ.

ಇದನ್ನೂ ಓದಿ: ಸೋಮಣ್ಣ ಬಿಜೆಪಿಗೆ ಹೋಗಿದ್ದೇ ವಿಸ್ಮಯ : ಡಿ.ಕೆ. ಶಿವಕುಮಾರ್

ಅಲ್ಲದೇ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಅಪಹಾಸ್ಯ ಮಾಡಲಾಗುತ್ತಿದೆ. ಪೇಜ್‌ನಲ್ಲಿ ಸಚಿವ ಮಧು ಬಂಗಾರಪ್ಪ ಅವರಂತೆ ನಟಿಸಿ, ಸಚಿವರೇ ಈ ರೀತಿ ಫೇಸ್ ಬುಕ್ ಅಕೌಂಟ್ ಕ್ರಿಯೇಟ್ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ನಾಯಕರು, ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅಪಹಾಸ್ಯ ಮಾಡಿ ಹಲವು ಪೋಸ್ಟ್ ಗಳನ್ನು ಹಾಕುತ್ತಿರುವಂತೆ ಬಿಂಬಿಸಲಾಗುತ್ತಿದೆ.

ಈ ಮೂಲಕ ಸಚಿವರಿಗೆ ಕೆಟ್ಟ ಹೆಸರು ಬರುವಂತೆ, ಅವರ ಘನತೆಗೆ ಧಕ್ಕೆ ತರುವಂತೆ ಮಾಡಲಾಗುತ್ತಿದೆ. ಕೂಡಲೇ ಈ ಕುರಿತು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರು ನೀಡಲಾಗಿದೆ. ಸಿಇಎನ್ ಪೊಲೀಸರು ದೂರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ.

 

 

RELATED ARTICLES

Related Articles

TRENDING ARTICLES