Monday, December 23, 2024

ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ

ಬೆಂಗಳೂರು : ರೂರ್ಕೆಲಾ-ಭುವನೇಶ್ವರ್ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್​ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ರೈಲಿನ ಕಿಟಕಿ ಗಾಜಿಗೆ ಹಾನಿಯಾಗಿದೆ.

ಒಡಿಸ್ಸಾದ ಮೇರಾಮಂಡಲಿ ಮತ್ತು ಬುಧಪಂಕ್​ ರೈಲ್ವೆ ನಿಲ್ದಾಣಗಳ ನಡುವೆ ರೈಲು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ರೈಲಿನ ಎಕ್ಸಿಕ್ಯೂಟೀವ್ ಕೋಚ್​ ನ ಕಿಟಕಿ ಗಾಜಿಗೆ ಹಾನಿಯಾಗಿದೆ. ರೈಲಿನ ಭದ್ರತೆಗೆ ನಿಯೋಜಿಸಿದ್ದ ರೈಲ್ವೆ ರಕ್ಷಣಾ ದಳದ ಸಿಬ್ಬಂದಿಯು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ತಕ್ಷಣವೇ ರೈಲ್ವೆ ರಕ್ಷಣಾದಳದ ಸಹಾಯಕ ಆಯುಕ್ತರು ಹೆಚ್ಚುವರಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದು, ಕಿಡಿಗೇಡಿಗಳಿಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ರೈಲು ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES

Related Articles

TRENDING ARTICLES