Friday, September 20, 2024

ಸಿಎಂ ಜನಸ್ಪಂದನೆಗೆ ಅಹವಾಲು ಹೊತ್ತು ಹರಿದು ಬಂದ ಜನರು: ಸ್ಥಳದಲ್ಲೆ ಪರಿಹಾರಕ್ಕೆ ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜನಸ್ಪಂದನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಹಮ್ಮಿಕೊಂಡಿದ್ದು ಸಾಲು ಸಾಲು ಸಮಸ್ಯೆಗಳ ಅಹವಾಲುಗಳನ್ನು ಹೊತ್ತು ಬೆಳಗ್ಗೆಯಿಂದಲೇ ಸಿಎಂ ಮನೆಯ ಮುಂದೆ ಸಾಕುಕಟ್ಟಿ ನಿಂತಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರೆ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿದ್ದು ನಾಡಿನ ವಿವಿಧೆಡೆಗಳಿಂದ ಆಗಮಿಸಿರುವ ಜನರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಹೊತ್ತು ಸಿಎಂ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ನಗರದಲ್ಲಿ ಇಂದು ಸಾಲು-ಸಾಲು ಪ್ರೊಟೆಸ್ಟ್​​: ಪ್ರಮುಖ ರಸ್ತೆಗಳ ಮಾರ್ಗ ಬದಲಾವಣೆ

ಬೀದಿ ಬದಿ ವ್ಯಾಪಾರಿಗಳಿಗೆ, ತಳ್ಳಯವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ಆಗುತ್ತಿರುವ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ಕಿರುಕುಳದ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಅವರಿಂದ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದರು. ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ‌ ಅವರಿಗೇ ಕಿರುಕುಳ ತಪ್ಪಿಸುವಂತೆ ಖಡಕ್ ಸೂಚನೆ ನೀಡಿದರು.

ವೃದ್ದಾಪ್ಯ ವೇತನ ಮಂಜೂರಾತಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳ ಹಿನ್ನೆಲೆಯಲ್ಲಿ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ನಿರ್ದೇಶಕರನ್ನು ಕರೆಸಿ ತಾಂತ್ರಿಕ‌ ತೊಂದರೆ ಇದ್ದರೆ ತಕ್ಷಣ ಬಗೆಹರಿಸಿ ಸಿಬ್ಬಂದಿಯಿಂದ ತೊಂದರೆ ಆಗುತ್ತಿದ್ದರೆ ಅವರ ಮೇಲೆ ಕ್ರಮ ಜರುಗಿಸಿ ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಮನೆ ಕಂದಾಯ ಕಟ್ಟಿದ್ದರೂ ದುಪ್ಪಟ್ಟು ಪೆನಾಲ್ಟಿ ಹಾಕಿದ್ದಾರೆ. ಕಂದಾಯ ಕಟ್ಟಿದ ರಶೀದಿ ಇಟ್ಟುಕೊಂಡು BBMP ಗೆ ಹೋದರೆ  ನಮಗೆ ಗೊತ್ತಿಲ್ಲ ಹೋಗಿ ಸರ್ಕಾರಕ್ಕೆ ಕೇಳಿ ಎಂದು ಸಿಬ್ಬಂದಿ ದರ್ಪದಿಂದ ನಡೆದುಕೊಳ್ಳುತ್ತಾರೆ ಎಂದು ವೃದ್ದೆಯೊಬ್ಬರ ದೂರಿಗೆ ಗರಂ ಆದ ಮುಖ್ಯಮಂತ್ರಿಗಳು ಬಿಬಿಎಂಪಿ ಅಧಿಕಾರಿಯನ್ನು ಕರೆದು ಸದರಿ ಪ್ರಕರಣವನ್ನು ಖುದ್ದಾಗಿ ಗಮನಿಸಿ ಸಂಜೆಯೊಳಗೆ ಪರಿಹಾರ ಒದಗಿಸಿ ನನಗೆ ರಿಪೋರ್ಟ್ ಮಾಡಿ ಎಂದಿದ್ದಾರೆ.

ಇನ್ನೂ, 148 ಮಂದಿ ವಿಶೇಷ ಚೇತನರಿಂದ ಮೂರು ಚಕ್ರ ವಾಹನಕ್ಕೆ ಬೇಡಿಕೆ ಹಚ್ಚಿದ್ದು. ಸಿಡಾಕ್ ಸಂಸ್ಥೆಯಿಂದ ತರಬೇತಿ ಪಡೆದಿದ್ದರೂ ಎರಡು ವರ್ಷದಿಂದ ನೆರವು ನೀಡಿಲ್ಲ ಎನ್ನುವ ದೂರನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ತರಬೇತಿ ಪಡೆದಿರುವ 98 ಮಂದಿಗೆ ಮುಂದಿನ 15 ದಿನಗಳ ಒಳಗೆ ಸಾಲ ಸೌಲಭ್ಯ ಒದಗಿಸಬೇಕು. ಉಳಿದವರಿಗೆ ತ್ರಿಚಕ್ರ ವಾಹನ ಕೊಡಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎನ್ನುವ ಖಡಕ್ ಸೂಚನೆಯನ್ನು ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ನೀಡಿದರು.

RELATED ARTICLES

Related Articles

TRENDING ARTICLES