Monday, December 23, 2024

ಇಂದು ‘ಕಾಂತಾರ’ ಪ್ರೀಕ್ವೆಲ್​​​​ನ ಫಸ್ಟ್‌ ಲುಕ್‌ ಬಿಡುಗಡೆ!

ಬೆಂಗಳೂರು: ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್​​​​ನ ಫಸ್ಟ್‌ ಲುಕ್‌ ಇಂದು ಬಿಡುಗಡೆಯಾಗಲಿದೆ. ಮೊದಲ ಭಾಗದಂತೆಯೇ, ಎರಡನೇ ಭಾಗವನ್ನು ಸಹ ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಲಿದ್ದಾರೆ, ಅವರು ಪ್ರಮುಖ ಪಾತ್ರದಲ್ಲಿ ನಟಿಸುವ ನಿರೀಕ್ಷೆಯಿದೆ.

ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನ ವಿಜಯ್ ಕಿರಂಗಂದೂರು ನಿರ್ಮಿಸಿರುವ ಈ ಸೀಕ್ವೆಲ್ ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್‌ನಲ್ಲಿ ಬಿಡುಗಡೆಯಾಗಲಿದೆ. ನಟ ರಿಷಬ್‌ ಶೆಟ್ಟಿ ಅವರ ಸಿನಿಪಯಣದ ದಿಕ್ಕನ್ನು ಬದಲಿಸಿದ ಸಿನಿಮಾ ಕಾಂತಾರ.

ಇದನ್ನೂ ಓದಿ: ವಿವಿಧ ರಾಶಿಗಳ ಇಂದಿನ ಭವಿಷ್ಯ ಹೇಗಿದೆ ಗೊತ್ತಾ ? ಇಲ್ಲಿದೆ ಮಾಹಿತಿ

ವಿಶ್ವವ್ಯಾಪಿ ಪ್ರೇಕ್ಷಕರ ಮನಗೆಲ್ಲುವುದರೊಂದಿಗೆ, ಬಾಕ್ಸ್‌ ಆಫೀಸ್‌ನಲ್ಲಿ ಕೋಟಿ ಕೋಟಿ ಹಣವನ್ನೂ ಬಾಚಿತ್ತು. ಇದೀಗ ಈ ಸಿನಿಮಾದ ಪ್ರೀಕ್ವೆಲ್‌ ತೆರೆಯ ಮೇಲೆ ಬರಲಿದ್ದು, ಪ್ರೇಕ್ಷಕರಲ್ಲಿ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ.

RELATED ARTICLES

Related Articles

TRENDING ARTICLES