Friday, November 22, 2024

ಬೆಂಗಳೂರು ಕಂಬಳ ಗೆದ್ದವರಾರು? ಕೂಟದ ಫೈನಲ್ ಫಲಿತಾಂಶ ಇಲ್ಲಿದೆ ನೋಡಿ

ಬೆಂಗಳೂರು: ಕರಾವಳಿ ತುಳು ಕೂಟದಿಂದ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ ನಮ್ಮ ಕಂಬಳಕ್ಕೆ ಸಾವಿರಾರು ಜನರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಕೂಟದ ಅಂತಿಮ ಫಲಿತಾಂಶವೂ ಕೂಡ ಹೊರಬಿದ್ದಿದೆ. 

ಕಂಬಳ ನೋಡಲು ಕರಾವಳಿ ಪೂಜಾ ಹೆಗಡೆ, ರಕ್ಷಿತ್ ಶೆಟ್ಟಿ, ರಮೇಶ್ ಅರವಿಂದ್, ಉಪೇಂದ್ರ ಸೇರಿದಂತೆ ಹಲವರು ಕಂಬಳ ಕಣ್ಣುಂಬಿಕೊಂಡರು.

 ಕಮಬಳದ ಫೈನಲ್ ಫಲಿತಾಂಶ ಹೀಗಿದೆ

ಬೆಂಗಳೂರು “ರಾಜ ಮಹಾರಾಜ” ಜೋಡುಕರೆ ಕಂಬಳ ಕೂಟದ ಕನೆಹಲಗೆ, ಅಡ್ಡಹಲಗೆ, ಹಗ್ಗ ಹಿರಿಯ, ನೇಗಿಲು ಹಿರಿಯ, ಹಗ್ಗ ಕಿರಿಯ, ನೇಗಿಲು ಕಿರಿಯ ವಿಭಾಗಗಲ್ಲಿ ಒಟ್ಟು 159 ಕೋಣಗಳ ಜೊತೆ ಸ್ಪರ್ಧಿಸಿದ್ದವು.  ಕಂಬಳದಲ್ಲಿ ಗೆದ್ದ -ಜೋಡಿಗೆ ಮೊದಲ ಬಹುಮಾನವಾಗಿ 16ಗ್ರಾಂ ಚಿನ್ನದ ಪದಕ ಹಾಗೂ ಒಂದು ಲಕ್ಷ ನಗದು, ಎರಡನೇ ಸ್ಥಾನಕ್ಕೆ 8 ಗ್ರಾಂ ಚಿನ್ನದ ಪದಕ ಹಾಗೂ 50 ಸಾವಿರ ನಗದು, ಮೂರನೇ ಸ್ಥಾನಕ್ಕೆ 4 ಗ್ರಾಂ ಚಿನ್ನ ಮತ್ತು 25 ಸಾವಿರ ಹಣವನ್ನು ವಿಭಾಗಾವಾರ ನೀಡಲಾಯಿತು.

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ

ಓಡಿಸಿದವರು: ಭಟ್ಕಳ ಶಂಕರ್ ನಾಯ್

ಹಗ್ಗ ಕಿರಿಯ:

ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ

ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ”

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ:

ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ

ಓಡಿಸಿದವರು: ಸರಪಾಡಿ ಧನಂಜಯ ಗೌಡ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ

ಓಡಿಸಿದವರು: ಪಟ್ಟೆ ಗುರು ಚರಣ್

ನೇಗಿಲು ಕಿರಿಯ:

ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಎರ್ಮಾಳ್‌ ಪುಚೊಟ್ಟುಬೀಡು ಬಾಲಚಂದ್ರ ಶೆಟ್ಟಿ

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ಅಡ್ಡ ಹಲಗೆ:

ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರು ‘ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಕನೆಹಲಗೆ:

(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ ) ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ “ಬಿ” ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

 

RELATED ARTICLES

Related Articles

TRENDING ARTICLES