Monday, December 23, 2024

ಎಂ.ಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್ ಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂ. ಗ್ರಾಮಾಂತರ: ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ (ಜೆ.ಆರ್.ಎಫ್ ಮಾದರಿ) ಪೂರ್ಣ ಸಮಯದ M.PHIL/PH.D ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಲು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಕ್ಟೋಬರ್ 31 ರವರೆಗೆ ದಿನಾಂಕ ನಿಗಧಿಪಡಿಸಲಾಗಿತ್ತು.

ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಹಿತದೃಷ್ಠಿಯಿಂದ ಹಾಗೂ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಸ್ವೀಕರಿಸುವ ಸದುದ್ದೇಶದಿಂದ ಅರ್ಜಿ ಸಲ್ಲಿಸಲು ನವೆಂಬರ್​ 30ರ ವರೆಗೆ‌ ಅವಧಿ ವಿಸ್ತರಿಸಲಾಗಿದೆ.

ಇದನ್ನೂ ಓದಿ: ನಟಿ ಲೀಲಾವತಿ ಆರೋಗ್ಯ ಏರುಪೇರು : ವಿನೋದ್​ ರಾಜ್​ ರನ್ನು ತಬ್ಬಿ ಧೈರ್ಯ ತುಂಬಿದ ಶಿವಣ್ಣ!

ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ).
ಕೋರ್ಸ್ ಪೂರ್ಣಕಾಲಿಕ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.8.00 ಲಕ್ಷಗಳನ್ನು ಮೀರಬಾರದು.
ಪಿ.ಹೆಚ್.ಡಿ ಮತ್ತು ಎಂ.ಫಿಲ್ ವ್ಯಾಸಂಗವನ್ನು ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಮಾಡತಕ್ಕದ್ದು.
ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ಮೀರಬಾರದು.
ಸರ್ಕಾರಿ ನೌಕರ ಅಭ್ಯರ್ಥಿಗಳು (ಕೇಂದ್ರ/ರಾಜ್ಯ) ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಅರ್ಜಿ ಸಲ್ಲಿಸಲು ನವೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿದಾರರಿಗೆ ಸೂಚನೆಗಳು
ಅರ್ಜಿದಾರರು https://sevasindhu.Karnataka.gov.in/Sevasindhu/Department Service ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಎಂ.ಫಿಲ್ ಅಥವಾ ಪಿ.ಹೆಚ್.ಡಿ ಗಳಲ್ಲಿ ಯಾವುದಾದರೂ ಒಂದು ಕೋರ್ಸ್ ಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ವಿಧಾನಗಳು ಮತ್ತು ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQs) ಇಲ್ಲಿ ಲಭ್ಯವಿದೆ. https://Dom.Karnataka.gov.in ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ವಿಶ್ವವಿದ್ಯಾಲಯದ ಜಿಲ್ಲೆಯ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿಗೆ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.
ಕಛೇರಿ ದೂರವಾಣಿ ಸಂಖ್ಯೆ
1.ಜಿಲ್ಲಾ ಕಛೇರಿ, ದೇವನಹಳ್ಳಿ 080- 29787455,
2.ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು 9986874875,
3.ತಾಲ್ಲೂಕು ಮಾಹಿತಿ ಕೇಂದ್ರ, ನೆಲಮಂಗಲ ತಾಲ್ಲೂಕು 8660197516,
4.ತಾಲ್ಲೂಕು ಮಾಹಿತಿ ಕೇಂದ್ರ, ದೇವನಹಳ್ಳಿ ತಾಲ್ಲೂಕು 8861926851,
5.ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ ತಾಲ್ಲೂಕು 7676905779,
6.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ 8277799990 ಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES