ಮೈಸೂರು: ಬಂಡೀಪುರ ಭಾಗದಲ್ಲಿ ಜನರ ನಿದ್ದೆ ಕೆಡಿಸಿದ್ದ ಹಾಘೂ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನುಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು, ಹೆಡಿಯಾಲ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿರುವ ನಂಜನಗೂಡು ತಾಲೂಕಿನ ಕಾಡಂಚಿನ ಪ್ರದೇಶವಾದ ಬಳ್ಳೂರು ಹುಂಡಿ ಗ್ರಾಮದ ಕಾಡಂಚಿನಲ್ಲಿ ಸೋಮವಾರ ಮಧ್ಯರಾತ್ರಿ ಹುಲಿ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ 207 ಕಾರ್ಯಾಚರಣೆಯಲ್ಲಿ ತೊಡಗಿದ್ದರು.
ಇದನ್ನೂ ಓದಿ: ಚಾಮುಂಡೇಶ್ವರಿಗೆ 59 ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ವೈಯಕ್ತಿಕವಾಗಿ ನೀಡಿದ ಸಚಿವೆ ಲಕ್ಷ್ಮಿ…
50ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಅಳವಡಿಸಿ, ಡೋನ್ ಕ್ಯಾಮೆರಾದ ಮೂಲಕವೂ ಹುಲಿ ಚಲನವಲನಗಳ ಪತ್ತೆ ಹಚ್ಚಿ ಸೆರೆ ಹಿಡಿಯಲಾಗಿದೆ. ಹುಲಿಯನ್ನು ಮೈಸೂರಿನ ಕೂರ್ಗಳ್ಳಿ ಸಮೀಪದ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಆರೋಗ್ಯ ತಪಾಸಣೆ ನಂತರ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ.