Wednesday, January 22, 2025

IND vs AUS 3rd T20: ಇಂದು ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯ ಜಯಿಸಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ ಇದೀಗ ತೃತೀಯ ಟಿ20 ಪಂದ್ಯ ಸಜ್ಜಾಗಿದೆ.ಇಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ.

ಇಂದಿನ ಪಂದ್ಯ ಗೆದ್ದರೆ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಳ್ಳಲಿದೆ. ಅತ್ತ ವಿಶ್ವ ಚಾಂಪಿಯನ್ ಕಾಂಗರೂ ಪಡೆಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆದ್ದರಷ್ಟೇ ಉಳಿಗಾಲ. ಹೀಗಾಗಿ ಇಂದು ಮೂರನೇ ಟಿ20 ಸಾಕಷ್ಟು ರೋಚಕತೆ ಸೃಷ್ಟಿಸಿದೆ.

ಭಾರತ ಟಿ20 ತಂಡದಲ್ಲಿ ಆಡುತ್ತಿರುವ ಎಲ್ಲ ಆಟಗಾರರು ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ತಂಡದಲ್ಲಿ ಬದಲಾವಣೆ ಅನುಮಾನ. ಗೆದ್ದ ತಂಡದ ಆಟಗಾರರೇ ಕಣಕ್ಕಿಳಿಯಬಹುದು.

ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ ಚಿತ್ರಾನ್ನ ತಿಂದ 23 ವಿದ್ಯಾರ್ಥಿಗಳು ಅಸ್ವಸ್ಥ   

ಗೆಲ್ಲಲೇಬೇಕಾದ ಪಂದ್ಯವಾಗಿದ್ದರಿಂದ ಆಸ್ಟ್ರೇಲಿಯ ಪ್ಲೇಯಿಂಗ್ XI ನಲ್ಲಿ ವಿಶ್ವಕಪ್ ಫೈನಲ್ ಹೀರೋ ಟ್ರಾವಿಸ್ ಹೆಡ್ ಆಡುವ ಸಂಭವವಿದೆ.

ಉಭಯ ತಂಡಗಳು:

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ವೇಡ್ (ನಾಯಕ), ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್

 

RELATED ARTICLES

Related Articles

TRENDING ARTICLES