ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ವಾಪಸ್ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದಕ್ಕೆ ಶಾಸಕ ಯುತ್ನಾಳ್ ಕೊರ್ಟ್ ಮೊರೆ ಹೋಗಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಯತ್ನಾಳ್ ನುಡಿದಂತೆ ನಡೆದಿದ್ದಾರೆ. ವಿಚಾರಣೆಗೆ ಬಾಕಿ ಇರುವಾಗ ಮೇಲ್ಮನವಿಯಲ್ಲೇ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದು, ಹೈಕೋರ್ಟ್ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ.
ಇದನ್ನೂ ಓದಿ: ಡಿಕೆಶಿ ವಿರುದ್ದ ಯತ್ನಾಳ್ ಹೈಕೋರ್ಟ್ ನಲ್ಲಿ ದಾವೆ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನುಬಾಹಿರವಾಗಿದ್ದು, ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು ಯತ್ನಾಳ್ ಮನವಿ ಮಾಡಿದ್ದಾರೆ.