Sunday, May 19, 2024

ಡಿಕೆಶಿ ಪ್ರಕರಣ ವಾಪಾಸ್​: ಸರ್ಕಾರದ ನಡೆ ಪ್ರಶ್ನಿಸಿ ಯತ್ನಾಳ್​​ ಹೈಕೋರ್ಟ್​ ಮೊರೆ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ವಾಪಸ್​ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದಕ್ಕೆ ಶಾಸಕ ಯುತ್ನಾಳ್​ ಕೊರ್ಟ್​​ ಮೊರೆ ಹೋಗಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಯತ್ನಾಳ್ ನುಡಿದಂತೆ ನಡೆದಿದ್ದಾರೆ. ವಿಚಾರಣೆಗೆ ಬಾಕಿ ಇರುವಾಗ ಮೇಲ್ಮನವಿಯಲ್ಲೇ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದು, ಹೈಕೋರ್ಟ್ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ.

ಇದನ್ನೂ ಓದಿ: ಡಿಕೆಶಿ ವಿರುದ್ದ ಯತ್ನಾಳ್ ಹೈಕೋರ್ಟ್​ ನಲ್ಲಿ ದಾವೆ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿಬಿಐ ತನಿಖೆ‌ ಬಹುತೇಕ ಮುಕ್ತಾಯದ ಹಂತದಲ್ಲಿದೆ‌. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನುಬಾಹಿರವಾಗಿದ್ದು, ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು ಯತ್ನಾಳ್ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES