Monday, December 23, 2024

ಹಾಸ್ಯ ನಟ ಮಂಡ್ಯ ರಮೇಶ್ ದಿಢೀರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್​ವುಡ್ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ದಿಢೀರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಮಂಡ್ಯ ರಮೇಶ್ ದಾಖಲಾಗಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ರಾಜರಾಜೇಶ್ವರಿ ನಗರದಲ್ಲಿ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಶೂಟಿಂಗ್ ಮಾಡುತ್ತಿದ್ದಾಗ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದರು. ಹೀಗಾಗಿ. ಕಾಲಿಗೆ ಚಿಕಿತ್ಸೆ ಕೊಡಲಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಮಂಡ್ಯ ರಮೇಶ್ ಪತ್ನಿ ಸರೋಜಾ ಹೆಗಡೆ ಮಾಹಿತಿ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ನಾಳೆ ಆಸ್ಪತ್ರೆಯಿಂದ ಮಂಡ್ಯ ರಮೇಶ್​ ಡಿಸ್ಚಾರ್ಜ್​​ ಆಗಲಿದ್ದಾರೆ. ಸದ್ಯ ಮಂಡ್ಯ ರಮೇಶ್​ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖದ ಹಂತದಲ್ಲಿದ್ದಾರೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES