Sunday, December 22, 2024

ಪ್ರಿಯತಮನಿಗಾಗಿ ಪಾಕಿಸ್ತಾನಕ್ಕೆ ತೆರಳಿದ್ದ ಅಂಜು ಭಾರತಕ್ಕೆ ವಾಪಸ್

ಬೆಂಗಳೂರು : ಈ ವರ್ಷ ಜುಲೈನಲ್ಲಿ ತನ್ನ ಫೇಸ್‌ಬುಕ್ ಗೆಳೆಯ ನಸ್ರುಲ್ಲಾನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ ಹೋಗಿದ್ದ ವಿವಾಹಿತ ಮಹಿಳೆ ಅಂಜು ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ್ದಾಳೆ.

ಅಂಜು ಎಂಬ ಈಕೆಯು ಫಾತಿಮಾ ಎಂದು ತನ್ನ ಹೆಸರನ್ನು ಬದಲಿಸಿಕೊಂಡಿದ್ದರು. ಇವರು ಜುಲೈನಲ್ಲಿ ಪಾಕಿಸ್ತಾನಕ್ಕೆ ತೆರಳಿ ಖೈಬರ್ ಪಖ್ತುಂಕ್ವಾದಲ್ಲಿ ವಾಸವಾಗಿದ್ದಳು. ಆಕೆ ಪಾಕಿಸ್ತಾನದಲ್ಲಿ ತನ್ನ ಫೇಸ್‌ಬುಕ್ ಗೆಳೆಯ ನಸ್ರುಲ್ಲಾನನ್ನು ಮದುವೆಯಾದ ಬಳಿಕ ಇಸ್ಲಾಂಗೆ ಮತಾಂತರವಾಗಿರುವುದಾಗಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಸೆಪ್ಟೆಂಬರ್‌ನಲ್ಲಿ ನಸ್ರುಲ್ಲಾ ತನ್ನ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾಳೆ. ತನ್ನ ಮಕ್ಕಳನ್ನು ನೋಡಲು ಬಯಸಿದ್ದಾಳೆ ಎಂದು ಹೇಳಿಕೊಂಡಿದ್ದರು. ಇದೀಗ ಅಂಜು ಭಾರತಕ್ಕೆ ಮರಳಿದ್ದಾಳೆ. ಈಕೆ ಭಾರತದಲ್ಲಿ ಅರವಿಂದ್ ಎಂಬಾತನ್ನು ಮದುವೆ ಆಗಿದ್ದಳು. ಈಕೆಗೆ ಇಬ್ಬರು ಮಕ್ಕಳಿದ್ದಾರೆ.

RELATED ARTICLES

Related Articles

TRENDING ARTICLES