Sunday, December 22, 2024

ಅಯ್ಯಪ್ಪ ಸ್ವಾಮಿಯ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಾಲಾಧಾರಿಗಳು ಆಕ್ರೋಶ

ವಿಜಯಪುರ: ಸಾಮಾಜಿಕ ಜಾಲತಾಣದಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ಬಗ್ಗೆ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಪ್ರಕರಣ ನಡೆದಿದೆ.

ಸಿಂದಗಿಯ ಜಗದೀಶ್ ಕಲಬುರ್ಗಿ ಎಂಬಾತ ತನ್ನ ಫೇಸ್​ಬುಕ್ ಖಾತೆಯಲ್ಲಿ ಅಯ್ಯಪ್ಪ ಸ್ವಾಮಿ ಹುಟ್ಟಿನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ. ಸದ್ಯ, ಅಯ್ಯಪ್ಪ ಸ್ವಾಮಿ ಬಗ್ಗೆ ಅಪಮಾನ ಮಾಡಿದ ಆರೋಪಿ ಜಗದೀಶ ಕಲಬುರ್ಗಿ ವಿರುದ್ಧ ಆಕ್ರೋಶಗೊಂಡಿರುವ ಮಾಲಾಧಾರಿಗಳು ಸಿಂದಗಿ ಪೊಲೀಸ್ ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ವಸತಿ ಶಾಲೆಯ 350 ಮಕ್ಕಳಿಗೆ ವಿಚಿತ್ರ ಚರ್ಮರೋಗ: ಆತಂಕದಲ್ಲಿ ಪೋಷಕರು

ಈ ಹಿಂದೆ ಇಂತಹದ್ದೇ ಪ್ರಕರಣದಲ್ಲಿ ಜೈಲು ಸೇರಿದ್ದ ಈತ ಮತ್ತೆ ಅದೇ ಚಾಳಿ ಮುಂದುವರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಯ್ಯಪ್ಪ ಮಾಲಾಧಾರಿಗಳು ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಗೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಅಲ್ಲದೆ, ಅಯ್ಯಪ್ಪ ಸ್ವಾಮೀ ಹುಟ್ಟಿನ ಬಗ್ಗೆ ಅವಮಾನಕಾರಿಯಾಗಿ ಪೋಸ್ಟ್ ಮಾಡಿರುವ ಜಗದೀಶ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀ ಧರ್ಮಶಾಸ್ತ್ರ ಸೇವಾ ಸಮೀತಿಯಿಂದ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES