Saturday, December 28, 2024

‘ಅಮ್ಮ’ ಎಂದು ಕರೆದಿದ್ದೀರಿ, ಕಾಂಗ್ರೆಸ್​ಗೆ ವೋಟು ಹಾಕಿ : ಸೋನಿಯಾ ಗಾಂಧಿ ಮನವಿ

ನವದೆಹಲಿ : ತೆಲಂಗಾಣ ರಾಜ್ಯದ ಜನತೆ ನನ್ನನ್ನು ಅಮ್ಮ ಎಂದು ಕರೆದಿದ್ದೀರಿ. ಇದರಿಂದಾಗಿ ನನಗೆ ತುಂಬಾ ಸಂತೋಷವಾಗಿದೆ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ನಿಮ್ಮ ಅಮೂಲ್ಯವಾದ ಮತವನ್ನು ಕಾಂಗ್ರೆಸ್‌ ಪಕ್ಷಕ್ಕೆ ನೀಡಿ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ನಿಮಿತ್ತ ಟ್ವೀಟರ್‌ನಲ್ಲಿ ವಿಡಿಯೋ ಸಂದೇಶ ನೀಡಿರುವ ಅವರು, ನನಗೆ ಅನಾರೋಗ್ಯ ಕಾಡಿದ ಕಾರಣ ಈ ಬಾರಿ ಚುನಾವಣೆ ಪ್ರಚಾರದಲ್ಲಿ ತೊಡಹಿಸಿಕೊಳ್ಳಲು ಆಗಲಿಲ್ಲ ಎಂದು ಹೇಳಿದ್ದಾರೆ.

ತೆಲಂಗಾಣ ರಾಜ್ಯ ರಚನೆ ಮಾಡಿದ್ದು ಕಾಂಗ್ರೆಸ್‌. ಹಾಗಾಗಿ, ಈ ಬಾರಿಯ ಚುನಾವಣೆ ವೇಳೆ ನನ್ನ ಸೋದರಿ, ಅಣ್ಣ-ತಮ್ಮಂದಿರು, ಮಕ್ಕಳು ನೀವೆಲ್ಲರೂ ಕಾಂಗ್ರೆಸ್‌ ಪಕ್ಷಕ್ಕೆ ಮತದಾನ ಮಾಡುವ ಮೂಲಕ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ರಾಹುಲ್‌ ಗಾಂಧಿ ಕೂಡ ಹಂಚಿ ಕೊಂಡು ಮತ ಯಾಚನೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES