Monday, December 23, 2024

ಡಿ.5ರವರೆಗೆ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ : ಅಯ್ಯಪ್ಪ ಸ್ವಾಮಿಯ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಾಲಾಧಾರಿಗಳು ಆಕ್ರೋಶ

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಚಾಮರಾಜನಗರದಲ್ಲಿ 17.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಕೆಲವೆಡೆ ನಿನ್ನೆ ತುಂತುರು ಮಳೆಯಾಗಿದೆ. ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES