ಬೆಂಗಳೂರು: ಒಟಿಟಿ ಪ್ಲಾಟ್ಫಾರ್ಮ್ಗಳ ಬಗ್ಗೆ ನಟ ರಿಷಬ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಅವರು ಗೋವಾದಲ್ಲಿ ನಡೆದ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದ ಇವರಿಗೆ ಸ್ಪೆಷಲ್ ಜ್ಯೂರಿ ಅವಾರ್ಡ್ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಅವರು ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ಒಟಿಟಿ ಪ್ಲಾಟ್ಫಾರ್ಮ್ಗಳು ಕನ್ನಡ ಸಿನಿಮಾಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೋರಿದ್ದಾರೆ.
ಇದನ್ನೂ ಓದಿ: ವಿಷ್ಣು ಅಭಿಮಾನಿಗಳಿಂದ ಡಿ.17ಕ್ಕೆ ಬೃಹತ್ ಪ್ರತಿಭಟನೆ!
‘ಒಟಿಟಿ ಪ್ಲಾಟ್ಫಾರ್ಮ್ಗಳು ಕನ್ನಡ ಚಿತ್ರರಂಗಕ್ಕೆ ಹೆಚ್ಚು ತೆರೆದುಕೊಂಡಿಲ್ಲ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಇಲ್ಲಿ ಸಬ್ಸ್ಕ್ರೈಬ್ಗಳು ಸಿಗುವುದಿಲ್ಲ. ಅಂತಾರಾಷ್ಟ್ರೀಯ ಸಿನಿಮೋತ್ಸವದವದರ ಬಳಿ ಹಾಗೂ ಅದರ ಸ್ಪಾನ್ಸರ್ಗಳ ಬಳಿ ನಮ್ಮ ಸಿನಿಮಾಗಳನ್ನು ಗುರುತಿಸುವಂತೆ ಕೋರುತ್ತೇನೆ. ಥಿಯೇಟರ್ನಲ್ಲಿ ಹೆಚ್ಚು ಮಾನ್ಯತೆ ಸಿಗದೇ ಇರುವ ಸಿನಿಮಾಗಳನ್ನು ಒಟಿಟಿ ಪ್ಲಾಟ್ಫಾರ್ಮ್ಗಳು ತೆಗೆದುಕೊಳ್ಳಬೇಕು’ ಎಂದು ಅವರು ಬೇಡಿಕೆ ಇಟ್ಟಿದ್ದಾರೆ.