Tuesday, May 7, 2024

OTT ಪ್ಲಾಟ್​ಫಾರ್ಮ್​ಗಳ ಬಗ್ಗೆ ರಿಷಬ್ ಅಸಮಾಧಾನ!

ಬೆಂಗಳೂರು: ಒಟಿಟಿ ಪ್ಲಾಟ್​ಫಾರ್ಮ್​ಗಳ ಬಗ್ಗೆ ನಟ ರಿಷಬ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅವರು ಗೋವಾದಲ್ಲಿ ನಡೆದ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದ ಇವರಿಗೆ ಸ್ಪೆಷಲ್ ಜ್ಯೂರಿ ಅವಾರ್ಡ್ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಅವರು ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ಒಟಿಟಿ ಪ್ಲಾಟ್​ಫಾರ್ಮ್​ಗಳು ಕನ್ನಡ ಸಿನಿಮಾಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ: ವಿಷ್ಣು ಅಭಿಮಾನಿಗಳಿಂದ ಡಿ.17ಕ್ಕೆ ಬೃಹತ್ ಪ್ರತಿಭಟನೆ!

‘ಒಟಿಟಿ ಪ್ಲಾಟ್​​ಫಾರ್ಮ್​ಗಳು ಕನ್ನಡ ಚಿತ್ರರಂಗಕ್ಕೆ ಹೆಚ್ಚು ತೆರೆದುಕೊಂಡಿಲ್ಲ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಇಲ್ಲಿ ಸಬ್​ಸ್ಕ್ರೈಬ್​ಗಳು ಸಿಗುವುದಿಲ್ಲ. ಅಂತಾರಾಷ್ಟ್ರೀಯ ಸಿನಿಮೋತ್ಸವದವದರ ಬಳಿ ಹಾಗೂ ಅದರ ಸ್ಪಾನ್ಸರ್​ಗಳ ಬಳಿ ನಮ್ಮ ಸಿನಿಮಾಗಳನ್ನು ಗುರುತಿಸುವಂತೆ ಕೋರುತ್ತೇನೆ. ಥಿಯೇಟರ್​ನಲ್ಲಿ ಹೆಚ್ಚು ಮಾನ್ಯತೆ ಸಿಗದೇ ಇರುವ ಸಿನಿಮಾಗಳನ್ನು ಒಟಿಟಿ ಪ್ಲಾಟ್​ಫಾರ್ಮ್​ಗಳು ತೆಗೆದುಕೊಳ್ಳಬೇಕು’ ಎಂದು ಅವರು ಬೇಡಿಕೆ ಇಟ್ಟಿದ್ದಾರೆ.

RELATED ARTICLES

Related Articles

TRENDING ARTICLES