Monday, December 23, 2024

ಪ್ರಿನ್ಸಿಪಾಲ್ ಕಿರುಕುಳ : ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೆಶ್ವರ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಕಾಲೇಜಿನ ಪ್ರಿನ್ಸಿಪಾಲ್‌ ಅವರ ಕಿರುಕುಳವೇ ಕಾರಣ ಎಂದು ಮನೆಯವರು ಆರೋಪಿಸಿದ್ದಾರೆ.

ಹಾನಗಲ್ ಪಟ್ಟಣದ NCJC ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಆದಿತ್ಯ ರಘುವೀರ ಚವ್ಹಾಣ(16) ಆತ್ಮಹತ್ಯೆ ಮಾಡಿಕೊಂಡವನು. ಆತ ಮಂಗಳವಾರ ಸಂಜೆ ತನ್ನ ಮನೆಯಲ್ಲೇ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ರೂ ಆತ ಬದುಕುಳಿಯಲಿಲ್ಲ.

ಈ ಸುದ್ದಿ ಓದಿದ್ದೀರಾ? : ಹೃದಯ ವಿದ್ರಾವಕ ಘಟನೆ : ಸಾಲಬಾಧೆಗೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯಲ್ಲಿರುವಾಗಲೇ ತನ್ನ ಸಾವಿಗೆ ಸಂಬಂಧಿಸಿ ಆದಿತ್ಯ ಮಾತನಾಡಿರುವ ವಿಡಿಯೋ ಈ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

RELATED ARTICLES

Related Articles

TRENDING ARTICLES