Thursday, December 19, 2024

ಹೊಸದಾಗಿ ರಾಜ್ಯದಲ್ಲಿ188 ಇಂದಿರಾ ಕ್ಯಾಂಟೀನ್‌ ಆರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಗ್ಯದ ಜನರ ಅನುಕೂಲಕ್ಕಾಗಿ ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ಶಾಸಕರ ಭವನದ ಆವರಣದಲ್ಲಿ ಸಂತ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ 225 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು. ಇದಲ್ಲದೇ ಅಗತ್ಯ ಇರುವ ಕಡೆ ಕ್ಯಾಂಟೀನ್ ಆರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್‌ಗೆ ಜಾಗದ ಕೊರತೆ ಇರುವ ಕಡೆ ಸಂಚಾರಿ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದರು.

ರಾಜ್ಯದ ಜನತೆಗೆ ಕನಕದಾಸ ಜಯಂತಿಯ ಶುಭಾಶಯ ಕೋರಿದ ಸಿಎಂ, ”ಕನಕದಾಸರು ಸಮಾಜ ಸುಧಾರಕರಾಗಿದ್ದರು. ಸಾಹಿತ್ಯದ ಮೂಲಕ ಮಾನವೀಯತೆ ಸಾರಿದ್ದರು.ವಿಶ್ವಮಾನವನ ಜಯಂತಿಯನ್ನು ಇಂದು ಸರ್ಕಾರ ಆಚರಿಸುತ್ತಿದೆ’ ಎಂದು ಹೇಳಿದರು.

ಇದನ್ನೂ ಓದಿ: ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ : ಬಿ.ವೈ.ವಿಜಯೇಂದ್ರ

ಬಳಿಕ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌ಗಳನ್ನು ನಾಡಿಗೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂತಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ ಎಂದರು.

RELATED ARTICLES

Related Articles

TRENDING ARTICLES