Tuesday, January 7, 2025

ಭ್ರೂಣಲಿಂಗ ಪತ್ತೆ; ಮಾತಾ ಆಸ್ಪತ್ರೆಯ ಕರೆಂಟ್ ಕಟ್!

ಮೈಸೂರು: ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ ವಿದ್ಯುತ್​ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.

ಕಳೆದ 4 ತಿಂಗಳಿಂದ ಮಾತಾ ಆಸ್ಪತ್ರೆ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಬರೋಬ್ಬರಿ 20 ಸಾವಿರ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ ಸಿಬ್ಬಂದಿ ಮಾತಾ ಆಸ್ಪತ್ರೆ ಕರೆಂಟ್​ ಕಟ್ ಮಾಡಿದೆ. ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗ ಪತ್ತೆ ಮಾಡುತ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದರು. ಇದು ದೊಡ್ಡ ಮಟ್ಟದಲ್ಲಿ ದಂಧೆಯಾಗಿದೆ.

ಇದನ್ನೂ ಓದಿ: ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಇದೀಗ ಆಸ್ಪತ್ರೆ ವಿರುದ್ಧ ಹಲವು ದೂರುಗಳು ಕೇಳಿಬರುತ್ತಿದ್ದಂತೆಯೇ ಚೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿವಂತೆ ಸೂಚನೆ ನೀಡಿದ ಬೆನ್ನಲ್ಲೇ ಮಾತಾ ಆಸ್ಪತ್ರೆಗೆ ನೀಡಲಾಗಿದ್ದ ವಿದ್ಯುತ್​ ಕಡಿತಗೊಳಿಸಲಾಗಿದೆ.

RELATED ARTICLES

Related Articles

TRENDING ARTICLES