Sunday, December 22, 2024

ಹೆಂಡ್ತಿ ಮೇಲೆ ವಿಪರೀತ ಸಂಶಯ : ಚಾಕುವಿನಿಂದ 5 ಬಾರಿ ಇರಿದು, ನೇಣಿಗೆ ಶರಣಾದ ಪತಿರಾಯ

ಮಡಿಕೇರಿ: ಪತ್ನಿ ಮೇಲೆ ವಿಪರೀತ ಸಂಶಯ ಪಡುತ್ತಿದ್ದ ಗಂಡನೊಬ್ಬ ಆಕೆ ತವರು ಮನೆಗೆ ಹೋಗಿದ್ದಾಗ ಅಲ್ಲಿ ಆಕೆಗೆ ಚಾಕುವಿನಿಂದ 5 ಬಾರಿ ಇರಿದು, ಬಳಿಕ ತನ್ನ ಮನೆಗೆ ಪರಾರಿಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ.

ಕಳೆದ ಒಂದೂವರೆ ವರ್ಷದ ಹಿಂದೆ ಮುತ್ತಿನ ಮುಳುಸೋಗೆ ಗ್ರಾಮದ ಶ್ವೇತಾ ಎಂಬಾಕೆಯನ್ನು ಗ್ರಾಮದ ಪ್ರಸನ್ನ (36) ಎಂಬಾತ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದ. ಆದರೆ ದಿನಕಳೆದಂತೆ ತನ್ನ ಪತ್ನಿ ಮೇಲೆ ಪ್ರಸನ್ನ ವಿಪರೀತ ಸಂಶಯ ಪಟ್ಟು ಆಕೆಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದ.

ಕಳೆದ ಒಂದೂವರೆ ವರ್ಷದ ಹಿಂದೆ ಮುತ್ತಿನ ಮುಳುಸೋಗೆ ಗ್ರಾಮದ ಶ್ವೇತಾ ಎಂಬಾಕೆಯನ್ನು ಗ್ರಾಮದ ಪ್ರಸನ್ನ (36) ಎಂಬಾತ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದ. ಆದರೆ ದಿನಕಳೆದಂತೆ ತನ್ನ ಪತ್ನಿ ಮೇಲೆ ಪ್ರಸನ್ನ ವಿಪರೀತ ಸಂಶಯ ಪಟ್ಟು ಆಕೆಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದ.ಈ ಬಗ್ಗೆ ಹಲವಾರು ಬಾರಿ ಮೈಸೂರು ಹಾಗೂ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿ, ದಂಪತಿಯ ರಾಜಿ ಸಂಧಾನ ಮಾಡಿ ಕಳುಹಿಸಿದ್ದರು.
ಆದರೆ ಪ್ರಸನ್ನ ಮಾತ್ರ ಪತ್ನಿ ಮೇಲೆ ಅನುಮಾನ ಪಡುವುದು ಬಿಟ್ಟಿರಲಿಲ್ಲ. ಆಕೆಯ ತಂಗಿಯ ಮೇಲೆ ವ್ಯಾಮೋಹವೂ ಹೆಚ್ಚಾಗಿ, ಆಕೆಯೊಂದಿಗೆ ಮದುವೆ ಮಾಡಿಸು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಪತಿಯ ಕಿರುಕುಳದಿಂದ ಬೇಸತ್ತು ಶ್ವೇತಾ ಕಳೆದ ಒಂದು ತಿಂಗಳ ಹಿಂದೆ ತವರು ಮನೆಗೆ ಬಂದು ಅಲ್ಲಿಂದಲೇ ಕೆಲಸ ಮಾಡುತ್ತಿದ್ದಳು. ಗುರುವಾರ ಬೆಳಗ್ಗೆ ತವರು ಮನೆಯಿಂದ ಕೆಲಸಕ್ಕೆ ಹೊರಟಿದ್ದ ವೇಳೆ ಹೊರಗೆ ಕಾದು ಕುಳಿತಿದ್ದ ಪ್ರಸನ್ನ ಆಕೆಗೆ ಚಾಕು ತೋರಿಸಿ ತಮ್ಮ ಮನೆಗೆ ಹೋಗೋಣ ಎಂದು ಕರೆದಿದ್ದಾನೆ. ಆದರೆ ಮನೆಯಲ್ಲಿ ಯಾರೂ ಇಲ್ಲ, ಅವರೆಲ್ಲಾ ಬಂದ ಮೇಲೆ ತಮ್ಮ ಮನೆಗೆ ಹೋಗೋಣ ಎಂದು ಕೇಳಿಕೊಂಡಿದ್ದಾಳೆ.

 

RELATED ARTICLES

Related Articles

TRENDING ARTICLES