Monday, December 23, 2024

ತೆಲಂಗಾಣ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ!

ತೆಲಂಗಾಣ: ಇಂದು ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಆಡಳಿತಾರೂಢ BRS, ಕಾಂಗ್ರೆಸ್ ಮತ್ತು ಬಿಜೆಪಿ ಕಣದಲ್ಲಿರುವ ಪ್ರಮುಖ ಪಕ್ಷಗಳಾಗಿವೆ. ಹೈದರಾಬಾದ್‌ನ ಕೆಲವೆಡೆ AIMIM ಕೂಡ ಸ್ಪರ್ಧಿಸಿದೆ.

ಸಂಜೆ 6 ರವರೆಗೆ ಮತದಾನ ನಡೆಯಲಿದ್ದು, 3.26 ಕೋಟಿ ಮತದಾರರು ಮತ ಹಾಕಲಿದ್ದಾರೆ. ರಾಜ್ಯದಾದ್ಯಂತ 35, 655 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. 2.8 ಲಕ್ಷ ಸಿಬ್ಬಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ. 12,000 ಮತಗಟ್ಟೆಗಳು ಸೂಕ್ಷ್ಮಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಪಯಣ ಕುರಿತ ಪುಸ್ತಕ ಬಿಡುಗಡೆ

ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್, ಅವರ ಮಗ, ಸಚಿವ ಕೆ.ಟಿ.ರಾಮರಾವ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ.ರೇವಂತ್ ರೆಡ್ಡಿ ಮತ್ತು ಬಿಜೆಪಿ ಲೋಕಸಭಾ ಸದಸ್ಯರಾದ ಬಂಡಿ ಸಂಜಯ್ ಕುಮಾರ್ ಮತ್ತು ಡಿ. ಅರವಿಂದ್ ಸೇರಿದಂತೆ 2.290 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮತ್ತೆ ಅಧಿಕಾರಕ್ಕೆ ಬರಲು BRS ಕೆ. ಚಂದ್ರಶೇಖರರಾವ್​​ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳ ಮೇಲೆ ಅವಲಂಬಿತವಾಗಿದ್ದಾರೆ.

RELATED ARTICLES

Related Articles

TRENDING ARTICLES